ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಾಂಗ್ಲಾದೇಶ: ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮುಹಮ್ಮದ್ ಯೂನಸ್‌ ಪ್ರಮಾಣ ವಚನ ಸ್ವೀಕಾರ

On: August 8, 2024 3:26 PM
Follow Us:
---Advertisement---

ಢಾಕಾ: ಬಾಂಗ್ಲಾದೇಶದಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ಮಧ್ಯೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಬರಲಿದೆ.

ಮುಹಮ್ಮದ್ ಯೂನಸ್ ಅವರು ಗುರುವಾರ ರಾತ್ರಿ 8:00 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಹೇಳಿದ್ದಾರೆ.ಮಧ್ಯಂತರ ಸರ್ಕಾರದ ಸಲಹಾ ಮಂಡಳಿಯು 15 ಸದಸ್ಯರನ್ನು ಒಳಗೊಂಡಿರಬಹುದು ಎಂದು ಸೇನಾ ಮುಖ್ಯಸ್ಥರು ಬಹಿರಂಗಪಡಿಸಿದ್ದಾರೆ.

ದೇಶಾದ್ಯಂತ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತಿದೆ. ಇದು ರಾಷ್ಟ್ರದ ಸ್ಥಿರತೆಗೆ ಧನಾತ್ಮಕ ಸಂಕೇತವಾಗಿದೆ ಇದೇ ಸಮಯದಲ್ಲಿ ತಿಳಿಸಿದ್ದಾರೆ. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ಮಂಗಳವಾರ ಸಂಸತ್ತನ್ನು ವಿಸರ್ಜಿಸಿದ್ದರು. ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದರು.

ಅರ್ಥಶಾಸ್ತ್ರಜ್ಞ ಯೂನಸ್ ಅವರಿಗೆ 2006 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಬಡವರಿಗೆ, ವಿಶೇಷವಾಗಿ ಮಹಿಳೆಯರಿಗೆ ಸಹಾಯ ಮಾಡಿದ ಹಿನ್ನೆಲೆಯಲ್ಲಿ ನೊಬೆಲ್​ ಶಾಂತಿ ಪ್ರಶಸ್ತಿ ಸಿಕ್ಕಿದೆ.

 

Join WhatsApp

Join Now

Join Telegram

Join Now

Leave a Comment