Site icon Kannada News-suddikshana

ಬಾಂಗ್ಲಾದೇಶಕ್ಕೆ ಶೇಖ್ ಹಸೀನಾಳನ್ನು ಹಸ್ತಾಂತರಿಸದಿದ್ದಲ್ಲಿ ಭಾರತದ ಹೈಕಮಿಷನ್‌ಗೆ ಮುತ್ತಿಗೆ ಬೆದರಿಕೆ

ಢಾಕಾ : ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್ ಅವರು ಶೇಖ್ ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದು, ಆಕೆಯನ್ನು ಕೂಡಲೇ ಬಾಂಗ್ಲಾದೇಶಕ್ಕೆ ಹಸ್ತಾಂತರಿಸದಿದ್ದರೆ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತದ ವಿರುದ್ಧ ಬಿಎನ್‌ಪಿ ಸೇರಿದಂತೆ ಬಾಂಗ್ಲಾದೇಶದ ವಿರೋಧ ಪಕ್ಷಗಳು ಸಿಟ್ಟಿಗೆದ್ದಿವೆ. ಬಿಎನ್​​ಪಿ ಪ್ರಸ್ತುತ ಮಧ್ಯಂತರ ಸರ್ಕಾರದಲ್ಲಿ ಪ್ರಬಲ ಪ್ರಭಾವ ಹೊಂದಿದೆ.

ಕಳೆದ ಶುಕ್ರವಾರ ಢಾಕಾದಲ್ಲಿ ನಡೆದ ‘ಸಾಮರಸ್ಯ ರ‍್ಯಾಲಿ’ಯಲ್ಲಿ ಮಾತನಾಡಿದ ಗಣ ಅಧಿಕಾರ್ ಪರಿಷತ್ ಅಧ್ಯಕ್ಷ ವಿಪಿ ನೂರುಲ್ ಹಕ್ ನೂರ್, ‘ಭಾರತದೊಂದಿಗೆ ಕೈದಿಗಳ ವಿನಿಮಯ ಒಪ್ಪಂದ ಮಾಡಿಕೊಂಡಿದ್ದೇವೆ. ಶೇಖ್ ಹಸೀನಾಳನ್ನು ಬೇರೆ ದೇಶಗಳಿಗೆ ಕಳುಹಿಸುವ ಬದಲು ಕೂಡಲೇ ಬಾಂಗ್ಲಾದೇಶಕ್ಕೆ ಕಳುಹಿಸಬೇಕು. ಇಲ್ಲವಾದಲ್ಲಿ ಭಾರತೀಯ ಹೈಕಮಿಷನರ್ ಅವರನ್ನು ಪೀಪಲ್ಸ್ ರೈಟ್ಸ್ ಕೌನ್ಸಿಲ್ ಸುತ್ತುವರೆದಿರುತ್ತದೆ ಎಂದು ಹೇಳಿದ್ದಾರೆ.

Exit mobile version