SUDDIKSHANA KANNADA NEWS/ DAVANAGERE/ DATE:16-08-2024
ದಾವಣಗೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಅತಿ ಹೆಚ್ಚು ಅಂಕ ಗಳಿಸಿದ ಬಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗಣ್ಯರಿಗೆ ಸನ್ಮಾನ ಸಮಾರಂಭ ಆ. 18ರಂದು ನಡೆಯಲಿದೆ ಎಂದು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಎಸ್. ನಂಜಾ ನಾಯ್ಕ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಬಂಜಾರ ಸೇವಾ ಸಂಘದ ಆಶ್ರಯದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಕುಂದುವಾಡ ರಸ್ತೆಯ ಬಂಜಾರ ಭವನದಲ್ಲಿ ಆಯೋಜಿಸಲಾಗಿದ್ದು, ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು ಎಂದು ಮಾಹಿತಿ ನೀಡಿದರು.
ಸೇವಾಲಾಲ್, ಅಂಬೇಡ್ಕರ್, ನಾಲ್ವಡಿ ಕೃಷ್ಣ ರಾಜೇಂದ್ರ ಒಡೆಯರ್ ಅವರ ಭಾವಚಿತ್ರಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಪಿ.ಟಿ.ಪರಮೇಶ್ವರ್ ನಾಯ್ಕ ಹಾಗೂ ಬಿ. ಟಿ. ಲಲಿತಾ ನಾಯ್ಕ ಪುಪ್ಪಾರ್ಚನೆ ಮಾಡಲಿದ್ದು,
ಮುಖ್ಯ ಅತಿಥಿಗಳಾಗಿ ಶಾಸಕರಾದ ಶಾಮನೂರು ಶಿವಶಂಕರಪ್ಪ, ಡಿ. ಜೆ. ಶಾಂತನಗೌಡ, ಬಿ.ಪಿ.ಹರೀಶ್, ಬಿ.ದೇವೇಂದ್ರಪ್ಪ, ಕೆ.ಎಸ್.ಬಸವಂತಪ್ಪ, ಬಸವರಾಜ್ ಶಿವಗಂಗಾ ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಎಸ್ ಎಸ್ ಎಲ್ ಸಿಯಲ್ಲಿ ಶೇಕಡಾ 85ರಷ್ಟು ಅಂಕ ಪಡೆದ 40, ಪಿಯುಸಿಯಲ್ಲಿ 53 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಗಣ್ಯರಾದ ಎನ್.ಜಯದೇವ ನಾಯ್ಕ, ಕಾಂತಾ ನಾಯ್ಕ, ದೂಡಾ ನೂತನ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ರಮೇಶ್ ಬಾಣೋತ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು..
ಗೋಷ್ಟಿಯಲ್ಲಿ ಸಮಾಜದ ಮುಖಂಡರಾದ ರವಿನಾಯ್ಕ, ಕುಬೇರ ನಾಯ್ಕ, ಗೋಪಿನಾಯ್ಕ, ಲಕ್ಷ್ಮಣ್ ರಮಾವತ್, ದೀಪಕ್, ರಮೇಶ್ ಮತ್ತಿತರರು ಹಾಜರಿದ್ದರು.