Home ಕ್ರೈಂ ನ್ಯೂಸ್ ಬಳ್ಳಾರಿ ಗಲಾಟೆಗೆ ಬ್ಯಾನರ್ ಬಿಚ್ಚಿದ್ದೇ ಪ್ರಚೋದನೆಗೆ ಕಾರಣ: ಸಿಎಂ ಸಿದ್ದರಾಮಯ್ಯ
ಕ್ರೈಂ ನ್ಯೂಸ್ದಾವಣಗೆರೆನವದೆಹಲಿಬೆಂಗಳೂರು

ಬಳ್ಳಾರಿ ಗಲಾಟೆಗೆ ಬ್ಯಾನರ್ ಬಿಚ್ಚಿದ್ದೇ ಪ್ರಚೋದನೆಗೆ ಕಾರಣ: ಸಿಎಂ ಸಿದ್ದರಾಮಯ್ಯ

Share
Share

ಹಾವೇರಿ: ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಜನಾರ್ದನ ರೆಡ್ಡಿ ಶ್ರೀರಾಮುಲು ಸೇರಿದಂತೆ ಅನೇಕರು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷದ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಮಾತನಾಡಿದ್ದಾರೆ. ಬಳ್ಳಾರಿಯಲ್ಲಿ ಗಲಾಟೆಯಾಗಿ ಒಬ್ಬ ವ್ಯಕ್ತಿ ಸಾಯಲು ಬ್ಯಾನರ್ ನ್ನು ಬಿಚ್ಚಿಹಾಕಿದ್ದೇ ಪ್ರಚೋದನೆಗೆ ಕಾರಣ ಎಂದು ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಕಾಂಗ್ರೆಸ್ ಸಾಧನೆ ಸಹಿಸಲು ಆಗುತ್ತಿಲ್ಲ. ಜನಪ್ರಿಯತೆ ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿದ್ದು, ಹಾಗಾಗಿ ಅಸೂಯೆ ತಡೆಯಲು ಆಗುತ್ತಿಲ್ಲ ಎಂದರು.

ಕಾನೂನು ಕೈಗೆತ್ತಿಕೊಂಡವರ ಮೇಲೆ ಕ್ರಮ:

ಹುಬ್ಬಳ್ಳಿಯಲ್ಲಿ ಮಹಿಳೆಯ ವಿವಸ್ತ್ರಗೊಳಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸುಜಾತ ಹಂಡೆ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಲು ಹೋಗಿದ್ದ ಸಂದರ್ಭದಲ್ಲಿ ಮಹಿಳೆಯೇ ಸ್ವತಃ ವಿವಸ್ತ್ರಗೊಂಡು ಮಹಿಳಾ ಪೊಲೀಸರನ್ನು ಕಚ್ಚಿದ್ದಾರೆ. ಆಕೆಯ ಮೇಲೆ ಎಫ್ಐಆರ್ ಆಗಿದ್ದು , ಪೊಲೀಸರು ವಿಚಾರಣೆಗೆ ಹೋಗಿದ್ದ ಸಂದರ್ಭದಲ್ಲಿ ಅವರನ್ನೇ ಕಚ್ಚಿದ್ದಾರೆ. ಹತ್ತು ಜನಕ್ಕೂ ಹೆಚ್ಚು ಮಹಿಳಾ ಪೊಲೀಸರಿದ್ದರು. ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಹಾಗೆ ಮಾಡಿದವರ ಮೇಲೆ ಕಾನೂನಿನ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅನ್ನಭಾಗ್ಯ ಯೋಜನೆಯನ್ನು ಅನೇಕರು ವ್ಯಾಪಾರ ಮಾಡಿಕೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯೋಜನೆ ಅಡಿ 5 ಕೆ.ಜಿ ಅಕ್ಕಿಯ ಜೊತೆಗೆ ಬೇರೆ ಪದಾರ್ಥಗಳನ್ನು ಕೊಡಲು ತೀರ್ಮಾನಿಸಲಾಗಿದೆ ಎಂದರು.

ಮುಖ್ಯಮಂತ್ರಿಗಳಾಗಿ ದೀರ್ಘಾವಧಿ ಆಗಿದೆ, ಪೂರ್ಣಾವಧಿಯಾಗುತ್ತದೆಯೇ ಎಂಬ ಪ್ರಶ್ನೆಗೆ ಪಕ್ಷದ ವರಿಷ್ಠರು ಅದನ್ನು ತೀರ್ಮಾನಿಸುತ್ತಾರೆ ಎಂದರು.

Share

Leave a comment

Leave a Reply

Your email address will not be published. Required fields are marked *