ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Basavaraj Bommai: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಸರಿ ಪಡೆ ರೋಷಾಗ್ನಿ ಸ್ಫೋಟ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದ ಬೊಮ್ಮಾಯಿ

On: July 19, 2023 2:40 PM
Follow Us:
Bjp Protest
---Advertisement---

SUDDIKSHANA KANNADA NEWS/ DAVANAGERE/ DATE:19-07-2023

 

ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)

ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ ಜೆಡಿಎಸ್ ಸದಸ್ಯರೊಂದಿಗೆ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 17,18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೊಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ. ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೊ ಅವರಿಗೆ ಗೌರವ ಸಲ್ಲಿಸಲು ಪ್ರೊಟೊಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೆಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗಿದೆ. ಸ್ಪಿಕರ್‌ಸ್ಥಾನ ದುರುಪಯೋಗ ಆಗಿದೆ. ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದ್ದಾರೆ. ಸ್ಪೀಕರ್ ಕಾಂಗ್ರೆಸ್ ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಪೀಕರ್ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ:  

M. P. Renukacharya: ಮುಗಿಯದ ಜಿಎಂಎಸ್ – ಎಂಪಿಆರ್ ಮಾತಿನ ವಾಗ್ಯುದ್ಧ: ಸಿದ್ದೇಶ್ವರರ “ಆ ಮಾತಿನಿಂದ” ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ಯಾಕೆ ರೇಣುಕಾಚಾರ್ಯ…?

 

ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೊಗಿರುವುದು ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ಕರಾಳ ದಿನ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರಿಗೆ ಅವಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ರಾಜ್ಯದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್:

ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು ಇದೇ ಮೊದಲ ಬಾರಿಯಲ್ಲ. ಸಾಕಷ್ಟು ಬಾರಿ ಸಮಾವೇಶಗಳು ನಡೆದಿವೆ. ಈ ಸಭೆಗೆ ಬಂದವರು ಅನೇಕರು ಎಂಎಲ್ ಎ, ಎಂಪಿ ಅಲ್ಲಾ, ಪ್ರಧಾನ‌ ಕಾರ್ಯದರ್ಶಿಗಳು ಏರ್ ಪೊರ್ಟ್ ಬಳಿ ನಿಂತು ಅವರನ್ನು ಸ್ವಾಗತ ಮಾಡಿದ್ದಾರೆ‌ ಎಂದು ಆರೋಪಿಸಿದರು.

ನೀವು ಅಧಿಕಾರದಲ್ಲಿರುವವರಿಗೆ ನಿಯಮದ ಪ್ರಕಾರ ಗೌರವ ಕೊಡಿ, ಪುಡಿ ಪಾರ್ಟಿಗಳ ಮುಖಂಡರು‌ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರಿಗೆ ಅವರ ರಾಜ್ಯದಲ್ಲಿಯೇ ಮರ್ಯಾದೆ ಇಲ್ಲ. ಜೊಶೆಪ್ ಕರ್ನಾಟಕ ಲೆಜಿಸ್ಲೆಟಿವ್ ಅಂತ ಹಾಕಿದ್ದಾರೆ. ಅವರು ರಾಜ್ಯದ ಶಾಸಕರೆ, ಇವರು ಕರ್ನಾಟಕದ ಮಾನವನ್ನು ರಾಜಕೀಯ ಲಾಭಕ್ಕೆ ಹರಾಜು ಹಾಕುತ್ತಿದ್ದಾರೆ. ಅಧಿಕಾರಿಗಳು ಯಾಕೆ ಅಲ್ಲಿ ಅಟೆಂಡ್ ಆಗಿದ್ದಾರೆ ಅವರಿಗೆ ನೊಟೀಸ್ ಕೊಡಬೇಕು ಎರಡು ದಿನದ ಸಂಬಳ ಕಡಿತ ಮಾಡಬೇಕು. ಸಿಎಸ್ ಅವರು ಏನು ಮಾಡುತ್ತಿದ್ದರು. ಅವರು ಅನುಮತಿ ನೀಡಿದ್ದಾರಾ ಎಂದು ಪ್ರಶ್ನಿಸಿದರು.

ಇಲ್ಲಿ ಬರಗಾಲ ಬಿದ್ದು ಸಾಕಷ್ಟು ಕೆಲಸಗಳಿವೆ ಸರ್ಕಾರದ ಕೆಲಸ ಬಿಟ್ಟು ಅಧಿಕಾರಿಗಳು ಅಲ್ಲಿಗೆ ಹೊಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಸರ್ಕಾರ ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿದೆ. ಇದು ಜನರ ತೆರಿಗೆ ಹಣ ನಿಮ್ಮ ಹಣವಲ್ಲ. ರಾಜ್ಯ ಸರ್ಕಾರ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

Basavaraj Bommai,

Basavaraj Bommai News,

Basavaraj Bommai Angry,

Basavaraj Bommai Akrosha,

Basavaraj Bommai Slams Congress,

Basavaraj Bommai Suddi

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವಿಮಾನ ನಿಲ್ದಾಣ

ವಿಮಾನ ನಿಲ್ದಾಣದ ಲಾಂಜ್‌ನಲ್ಲಿ ಪ್ರವೇಶ ನಿರಾಕರಿಸಲಾಗಿದೆಯೇ? ಹಾಗಾದ್ರೆ ಈ ಕಾರಣಕ್ಕಾಗಿಯೇ!

ಸಹಾಯಧನ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ಸಿಗಲಿದೆ 6,000 ರೂ. ಸಹಾಯಧನ

ಧರ್ಮಸ್ಥಳ

ಧರ್ಮಸ್ಥಳದಲ್ಲಿ ಕಾಣೆಯಾಗಿರುವ ಪುತ್ರಿ ಅನನ್ಯಾ ಹುಡುಕಿಕೊಡಿ ಎಂದಿದ್ದ ಸುಜಾತಾ ಭಟ್ ಬಗ್ಗೆ ಹೊರಬಿತ್ತು ಸ್ಫೋಟಕ ಮಾಹಿತಿ!

ದಸರಾ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ವಿರೋಧ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು: ಮೊಹಮ್ಮದ್ ಜಿಕ್ರಿಯಾ

ಶಿವಾಜಿ

“ಅಫ್ಜಲ್ ಗುರು ವಧೆ ಮಾಡುವ ಶಿವಾಜಿ ಮಹಾರಾಜರ ಪೋಸ್ಟರ್”: ತೆರವಿಗೆ ಪೊಲೀಸರು ಬರುತ್ತಿದ್ದಂತೆ ಮಟಿಕಲ್ ನಲ್ಲಿ ಉದ್ವಿಗ್ನ ವಾತಾವರಣ!

ಹಿಂದೂ

ಆ. 29ಕ್ಕೆ ಹಳೇಕುಂದುವಾಡಕ್ಕೆ ಹಿಂದೂ “ಫೈರ್” ಬಾಂಡ್ ಹಾರಿಕಾ ಮಂಜುನಾಥ್: ಯುವಕರಲ್ಲಿ ದೇಶಭಕ್ತಿ, ಸಂಸ್ಕೃತಿ ಮೂಡಿಸುವುದು ಹೇಗೆ? ವಿಷಯದ ಬಗ್ಗೆ ದಿಕ್ಸೂಚಿ ಭಾಷಣ

Leave a Comment