Site icon Kannada News-suddikshana

Basavaraj Bommai: ಕಾವೇರಿ ನೀರು ಬಿಡುಗಡೆ ವಿಚಾರ, ತಮಿಳುನಾಡಿನಿಂದ ಮತ್ತೆ ಕ್ಯಾತೆ: ಸಿದ್ದರಾಮಯ್ಯರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಬರೆದಿರುವ ಪತ್ರದಲ್ಲೇನಿದೆ..?

SUDDIKSHANA KANNADA NEWS/ DAVANAGERE/ DATE:14-08-2023

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ‌ಲೆಕ್ಕಿಸದೇ ಸಿಡಬ್ಲುಡಿಟಿ ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಡು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಅಧಿಕಾರಿಗಳು
ಸಿಡಬ್ಲುಎಂಎ ದಲ್ಲಿ ಪ್ರತಿಭಟಿಸದೇ ಸುಮ್ಮನೆ ಇದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಬಸವರಾಜ್ ಬೊಮ್ಮಾಯಿ (Basavaraj Bommai) ಬರೆದಿರುವ ಪತ್ರದ ವಿವರ:

ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್ ಗೆ ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ‌.

ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲದಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ 6-8-2023 ಕ್ಕೆ 14.054 ಟಿಎಂಸಿ ನೀರು ಹೋಗಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ಒಟ್ಟು ತಮಿಳುನಾಡಿದ ಮೆಟ್ಟೂರು ಡ್ಯಾಮನಲ್ಲಿ ಈ ವರ್ಷ 83.831ಟಿಎಂಸಿ ನೀರು ಬಂದಿರುತ್ತದೆ.

ತಮಿಳುನಾಡು ಕುರುವೈ ಬೆಳೆಗೆ 1 ಲಕ್ಷ ಎಂಬತ್ತು ಸಾವಿರ ಎಕರೆ ಬೆಳೆ ಸಿಡಬ್ಲುಡಿಟಿ ಪ್ರಕಾರ ಬೆಳೆಯಬೇಕು ಹಾಗೂ 32 ಟಿಎಂಸಿ ನೀರು ಬಳಸಬೇಕು. ಆದರೆ, ತಮಿಳುನಾಡು 7-8-23 ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು ಸಿಡಬ್ಲುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ.

ಈಗಿರುವ ನಮ್ಮ ನಾಲ್ಕು ಡ್ಯಾಮ್ ಗಳ ನಿರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ಗದೆ. ಅದೇ ರೀತಿ ಕಾವೇರಿ ‌ಜಲಾನಯನ ಪ್ರದೇಶದ ಕರೀಫ್ ಬೆಳೆಗಳಿಗೆ ನಿರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ.

ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ಹಾಗು ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದಲ್ಲಿ ಬಸವರಾಜ್ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

BENGALURU: The CWD has violated the order and provided water to the Kuruvai area crops in four areas despite the lack of water in the Cauvery basin. It is our officers Former CM Basavaraj Bommai has expressed outrage that not protesting in CWMA is a threat to the state’s interest.

Exit mobile version