SUDDIKSHANA KANNADA NEWS/ DAVANAGERE/ DATE:18-08-2023
ಬೆಂಗಳೂರು: ರಾಜ್ಯ ಸರ್ಕಾರ ಭ್ರಷ್ಟಾಚಾರ ಹಾಗೂ ಕಮಿಷನ್ ದಂಧೆಯ ವಿರುದ್ಧ ಕೇಳಿ ಬರುತ್ತಿರುವ ಆರೋಪವನ್ನು ಡೈವರ್ಟ್ ಮಾಡಲು ಬಿಜೆಪಿ ಶಾಸಕರು ಪಕ್ಷಾಂತರದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ನಾನು ಮಾತನಾಡಿದ್ದು, ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:
Bhadra Dam:ಭದ್ರಾ ಜಲಾಶಯದ ಒಳಹರಿವು ಕಡಿಮೆ, ಅರೆನೀರಾವರಿ ಬೆಳೆಗೆ ಮಾತ್ರ ನೀರು: ನೀರಾವರಿ ಇಲಾಖೆ ಅಧಿಕಾರಿಗಳು ಕೊಟ್ಟ ಎಚ್ಚರಿಕೆ ಏನು…?
ಬಿಜೆಪಿಯ ಯಾವುದೇ ಶಾಸಕರು ಪಕ್ಷ ತೊರೆಯುವುದಿಲ್ಲ, ಸ್ಥಳೀಯವಾಗಿರುವ ಸಮಸ್ಯೆಗಳನ್ನು ಹೇಳಿದ್ದಾರೆ. ಅದನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೇವೆ. ಎಲ್ಲವನ್ನು ಬಗೆ ಹರಿಸುತ್ತೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ನವರ ವಿರುದ್ದ ಕೇಳಿ ಬಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅವರ ಶಾಸಕರೇ ದಂಗೆ ಎದ್ದಿರುವುದನ್ನು ಮರೆ ಮಾಚಲು ಪಕ್ಷಾಂತರದ ಸುಳ್ಳು ಕತೆ ಹೇಳುತ್ತಿದ್ದಾರೆ ಎಂದು ಆರೋಪಿಸಿದರು.