ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸಚಿವರ ವಿರುದ್ಧವೇ ಬುಸುಗುಟ್ಟಿದ್ದ ಬಸವರಾಜ್ ಶಿವಗಂಗಾ, ಎಸ್. ಎಸ್. ಮಲ್ಲಿಕಾರ್ಜುನ್ ಜೊತೆಯಾಗಿ.. ಹಿತವಾಗಿ…!

On: October 8, 2025 7:10 PM
Follow Us:
ಎಸ್. ಎಸ್. ಮಲ್ಲಿಕಾರ್ಜುನ್
---Advertisement---

SUDDIKSHANA KANNADA NEWS/DAVANAGERE/DATE:08_10_2025

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಬಹಿರಂಗವಾಗಿಯೇ ಬುಸುಗುಟ್ಟಿದ್ದ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಜೊತೆಯಾಗಿ ಕಾಣಿಸಿಕೊಂಡರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚನ್ನಗಿರಿಗೆ ಆಗಮಿಸಿದ್ದ ವೇಳೆ ಸಚಿವರು ಮತ್ತು ಶಾಸಕರು ಖುಷಿ ಖುಷಿಯಾಗಿ ಮಾತನಾಡಿದರು.

READ ALSO THIS STORY: ದಾವಣಗೆರೆ ನೂತನ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಪಂಪಾಪತಿ ಹೆಸರು: ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಘೋಷಣೆ

ಕಾರ್ಯಕ್ರಮಕ್ಕೂ ಮುನ್ನ ಬಸವರಾಜ್ ಶಿವಗಂಗಾ ಮತ್ತು ಎಸ್. ಎಸ್. ಮಲ್ಲಿಕಾರ್ಜುನ್ ಅವರು ಅಕ್ಕಪಕ್ಕದಲ್ಲಿಯೇ ಕುಳಿತು ಗಮನ ಸೆಳೆದರು. ಇನ್ನು ಕಾರ್ಯಕ್ರಮದಲ್ಲಿಯೂ ಜೊತೆಯಾಗಿ ಕಾಣಿಸಿಕೊಂಡರು.

ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕೈಗೆ ಸಿಗಲ್ಲ, ಫೋನ್ ಕರೆ ಸ್ವೀಕರಿಸಲ್ಲ, ನಮ್ಮ ಕೆಲಸಗಳು ಆಗುತ್ತಿಲ್ಲ. ವ್ಯಾಪಾರ ವಹಿವಾಟು ನಡೆಸಿಕೊಂಡು
ಇರುವವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಹೈಕಮಾಂಡ್ ಗೆ ಒತ್ತಾಯಿಸಿದ್ದಾರೆ. ಮಾತ್ರವಲ್ಲ, ಮಲ್ಲಿಕಾರ್ಜುನ್ ಅವರನ್ನು ಬದಲಾಯಿಸಿ ಬೇರೆಯೊಬ್ಬರನ್ನು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಒತ್ತಾಯಿಸಿದ್ದರು.

ಆದ್ರೆ, ಚನ್ನಗಿರಿಯಲ್ಲಿ ಇಂದು ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ಜಿಲ್ಲೆ ವತಿಯಿಂದ ಏರ್ಪಡಿಸಿದ್ದ ಚನ್ನಗಿರಿಯ ಅಜ್ಜಿಹಳ್ಳಿ ಬಳಿ ನೂತನವಾಗಿ ನಿರ್ಮಾಣ ಮಾಡಿರುವ ಬಸ್ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಮತ್ತು ಶಾಸಕರು ಜೊತೆಜೊತೆಯಾಗಿ ನಗು ನಗುತ್ತಾ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರ ಗಮನ ಸೆಳೆಯಿತು.

ಇನ್ನು ಸಚಿವ ಮಲ್ಲಿಕಾರ್ಜುನ್ ಅವರು ಸಹ ಅವನೊಬ್ಬ ಮೆಂಟಲ್. ಏನೇನೋ ಮಾತನಾಡುತ್ತಾನೆ. ಹೆಚ್ಚು ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಬಸವರಾಜ್ ಶಿವಗಂಗಾ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment