Site icon Kannada News-suddikshana

ಎಲ್ಲಾ ಟಿ-20 ಐಪಿಎಲ್ ಪಂದ್ಯಗಳ ರದ್ದುಗೊಳಿಸಿದ ಬಿಸಿಸಿಐ

SUDDIKSHANA KANNADA NEWS/ DAVANAGERE/ DATE-09-05-2025

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸಂಘರ್ಷ ಹಿನ್ನೆಲೆಯಲ್ಲಿ ಎಲ್ಲಾ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

ಇನ್ನೂ ಹದಿನಾರು ಪಂದ್ಯಗಳು ಬಾಕಿ ಇದ್ದವು. ಆದ್ರೆ, ಪಾಕ್ ಹಾಗೂ ಭಾರತ ನಡುವಿನ ಉದ್ವಿಗ್ನತೆ ಕಾರಣಕ್ಕೆ ಬಿಸಿಸಿಐ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ.

ಮಾತ್ರವಲ್ಲ, ಯುದ್ಧ ಪರಿಸ್ಥಿತಿ ತಣ್ಣಗಾದ ಬಳಿಕ ಮತ್ತೆ ಪಂದ್ಯಗಳು ಪ್ರಾರಂಭವಾಗಲಿವೆ. ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡಿಸಿ vs ಪಿಬಿಕೆಎಸ್ ಐಪಿಎಲ್ 2025 ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿಸಲಾಗಿತು.

ಈಗ ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಿಸಿಸಿಐ ಬಂದಿದ್ದು, ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿ, ಗಡಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರುತ್ತಿದ್ದು, ಆಟಗಾರರ ರಕ್ಷಣೆ, ಪ್ರೇಕ್ಷಕರ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ, ಎಲ್ಲಾ ಪಂದ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Exit mobile version