Site icon Kannada News-suddikshana

35 ದಿನಗಳ ಕಾಲ ಬ್ಯೂಟಿ ಪಾರ್ಲರ್ ಉಚಿತ ತರಬೇತಿ: ಅರ್ಜಿ ಆಹ್ವಾನ

ಅರ್ಜಿ

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದ್ದು, ನವೆಂಬರ್ 04 ರಿಂದ ಪ್ರಾರಂಭವಾಗಲಿದೆ. ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

READ ALSO THIS STORY: ದೇವಸ್ಥಾನ ಸೇರಿ ಪ್ರೇಕ್ಷಣೀಯ ಸ್ಥಳಗಳಲ್ಲಿ ವೆಡ್ಡಿಂಗ್ ಫೋಟೋ, ವಿಡಿಯೋ ಶೂಟ್ ಗೆ ಅನುಮತಿ ಕೊಡಿ: ಡಿಸಿಗೆ ಸಲ್ಲಿಸಿದ ಮನವಿಯಲ್ಲೇನಿದೆ?

ಅರ್ಜಿ ಸಲ್ಲಿಸಬಯಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ
ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9481506564, 9113880324, 08027728166 ಅನ್ನು ಸಂಪರ್ಕಿಸಬಹುದಾಗಿದೆ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version