Site icon Kannada News-suddikshana

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

ಚಿಕ್ಕಮಗಳೂರು: ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಪ್ರಕರಣವು ಲಕ್ಷಾಂತರ ಭಕ್ತರು ಬರುವ ಧಾರ್ಮಿಕ ಕ್ಷೇತ್ರವನ್ನು ಅಪವಿತ್ರಗೊಳಿಸಬೇಕು ಎನ್ನುವ ದುಷ್ಟಮನಸ್ಥಿತಿಗಳ ಮತಾಂಧತೆ ತೋರಿಸುತ್ತದೆ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಪ್ರತಿಕ್ರಿಯಿಸಿದರು

ಗುರುವಾರ ನಗರದಲ್ಲಿ ಮಾತನಾಡಿ, ಬರೀ ನೇತ್ರಾವತಿ ಮಾತ್ರವಲ್ಲ. ರಾಜ್ಯದ ಉದ್ದಗಲಕ್ಕೂ ಇದೆ ಪರಿಸ್ಥಿತಿ ಇದೆ. ರಾಜ್ಯದಲ್ಲಿ ಗೋಹತ್ಯೆ ನಿಷೇದ ಕಾಯ್ದೆ ಇದೆಯೋ ಇಲ್ಲವೋ ಎಂಬ ಅನುಮಾನ ಮೂಡಿಸುತ್ತದೆ. ಕಾಯ್ದೆ ಇದೆ ಎಂದಾದರೇ, ಗೋಹತ್ಯೆ ಹೇಗಾಗುತ್ತದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದರು.

ಪ್ರಕರಣಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಗೋಹತ್ಯೆ ಕಾಯ್ದೆಯನ್ನು ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ ಎನ್ನುವುದು ತೋರಿಸುತ್ತಿದೆ. ಗೋಕಳ್ಳರು ರಸ್ತೆ, ಕೊಟ್ಟಿಗೆಯಲ್ಲಿರುವ ಹಸುಗಳನ್ನು ಬಿಟ್ಟಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಇದು ನಮ್ಮದೆ ಸರ್ಕಾರವೆಂದು ಗೋಕಳ್ಳರು ರಾಜಾರೋಷವಾಗಿ ಗೋಹತ್ಯೆ, ಕಳ್ಳತನ ಮಾಡುತ್ತಿದ್ದಾರೆ” ಎಂದು ದೂಷಿಸಿದರು.

Exit mobile version