Site icon Kannada News-suddikshana

ಬೆಳಗಾವಿ: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ: ಅಕ್ರಮ‌ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಖಾನಾಪುರ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ ಘಟನೆ ಜ.8 ರ ಬುಧವಾರ ಬೆಳಿಗ್ಗೆ ನಡೆದಿದೆ.

ಪ್ರಕಾಶ ಗಾಯಕವಾಡ ಅವರ ಗಣೇಶಪುರದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಲ್ಲದೆ ಪ್ರಕಾಶ ಗಾಯಕವಾಡರ ನಿಪ್ಪಾಣಿಯಲ್ಲಿರುವ ಮನೆ ಹಾಗೂ ಖಾನಾಪುರ ಕಚೇರಿ ‌ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳಗಾವಿ ಲೋಕಾಯುಕ್ತ ಎಸ್ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ಪಿಐ ನಿರಂಜನ್ ಪಾಟೀಲ ಈ ದಾಳಿಯಲ್ಲಿ ಭಾಗಿಯಾಗಿದ್ದರು

Exit mobile version