Home ದಾವಣಗೆರೆ ಎಸ್‌ಐಆರ್ ರದ್ದುಗೊಳಿಸಲು ಬಿ. ಕೆ. ಹರಿಪ್ರಸಾದ್ ಒತ್ತಾಯ: ನವೆಂಬರ್ 1ಕ್ಕೆ ದೆಹಲಿ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ
ದಾವಣಗೆರೆಕ್ರೈಂ ನ್ಯೂಸ್ನವದೆಹಲಿಬೆಂಗಳೂರು

ಎಸ್‌ಐಆರ್ ರದ್ದುಗೊಳಿಸಲು ಬಿ. ಕೆ. ಹರಿಪ್ರಸಾದ್ ಒತ್ತಾಯ: ನವೆಂಬರ್ 1ಕ್ಕೆ ದೆಹಲಿ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ

Share
ಬಿ. ಕೆ. ಹರಿಪ್ರಸಾದ್
Share

ಬೆಂಗಳೂರು: ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಮತಾಧಿಕಾರದ ರಕ್ಷಣೆಗಾಗಿ ಇಂದು ಬೆಂಗಳೂರಿನ ಶಾಸಕರ ಭವನದಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳಾದ ಸಿಪಿಎಂ, ಸಿಪಿಐ, ಸಿಪಿಐಎಂಎಲ್(ಲಿಬರೇಷನ್) ಸಮಾಜವಾದಿ ಪಕ್ಷ, ಫಾರ್ವರ್ಡ್ ಬ್ಲಾಕ್ ಪಕ್ಷದ ರಾಜ್ಯ ನಾಯಕರ ರಾಜ್ಯಮಟ್ಟದ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆಸಲಾಯಿತು.

ಎಸ್‌ಐಆರ್ ಹೆಸರಿನಲ್ಲಿ ನೈಜ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನದ ವಿರುದ್ಧ ಸಂಘಟಿತ ಹೋರಾಟ ರೂಪಿಸಲು ಮಿತ್ರಪಕ್ಷಗಳೊಂದಿಗೆ ಚರ್ಚಿಸಲಾಯಿತು.

ಈ ವೇಳೆ ಮಾತನಾಡಿದ ಬಿ. ಕೆ. ಹರಿಪ್ರಸಾದ್ ಅವರು ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣ ರದ್ದುಗೊಳಿಸಬೇಕು, ಮತದಾರರ ಪಟ್ಟಿಯಿಂದ ಕೈಬಿಡಲಾದ ಅರ್ಹ ಮತದಾರರನ್ನು ಮರುಸೇರ್ಪಡೆಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ
ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಸ್ಪಷ್ಟ ನಿಲುವಾಗಿದೆ. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳ ಸಮನ್ವಯ ಸಮಿತಿ ರಚಿಸಿ, ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಜನಾಂದೋಲನ ರೂಪಿಸಲಿದ್ದೇವೆ ಎಂದರು.

ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್ , ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಕೆ. ಪ್ರಕಾಶ್, ಸಿಪಿಐ ರಾಜ್ಯ ಕಾರ್ಯದರ್ಶಿ ಸ್ವಾತಿ ಸುಂದರೇಶ್, ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ಮಂಜಪ್ಪ ಯಾದವ್ ಸೇರಿದಂತೆ ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್ ಹಾಗೂ ಇಂಡಿಯಾ ಮೈತ್ರಿಕೂಟದ ವಿವಿಧ ಮಿತ್ರಪಕ್ಷಗಳ ಮುಖಂಡರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles