Home ದಾವಣಗೆರೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದ್ರೋಹ ಮುಂದುವರಿಕೆ: ಎಸ್. ಎಸ್. ಮಲ್ಲಿಕಾರ್ಜುನ್ ಕಿಡಿ
ದಾವಣಗೆರೆನವದೆಹಲಿಬೆಂಗಳೂರು

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದ್ರೋಹ ಮುಂದುವರಿಕೆ: ಎಸ್. ಎಸ್. ಮಲ್ಲಿಕಾರ್ಜುನ್ ಕಿಡಿ

Share
ಕೇಂದ್ರ ಸರ್ಕಾರ
Share

ದಾವಣಗೆರೆ: ಕೇಂದ್ರ ಸರ್ಕಾರ ಕನ್ನಡಿಗರಿಗೆ ಅಕ್ಷರಶಃ ನಾಮ ಇಡುತ್ತಿದೆ. ಇದರಲ್ಲಿ ಅನುಮಾನವೇ ಇಲ್ಲ. ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂಬುದು ಒಂದೆಡೆಯಾದರೆ, ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ಸರಿಯಾಗಿ ಅನುದಾನ ನೀಡುತ್ತಿಲ್ಲ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ದ್ರೋಹ ಬಗೆದಿದ್ದಾರೆ. ಕೇಂದ್ರ ಸರ್ಕಾರ ಕರ್ನಾಟಕದ ವಿರುದ್ಧ ವಿಷಕಾರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ರಾಜ್ಯ ಸರ್ಕಾರ ೫೦% ಗಿಂತ ಹೆಚ್ಚು ಅನುದಾನವನ್ನು ಭರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ.

15ನೇ ಹಣಕಾಸು ಆಯೋಗದಲ್ಲಿ ಇದನ್ನು 3.48%ಗೆ ಇಳಿಸಲಾಗಿತ್ತು. ಇದರ ಪರಿಣಾಮವಾಗಿ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ 80 ಸಾವಿರ ಕೋಟಿ ರೂ. ನಷ್ಟವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ರೂ. ಹೆಚ್ಚಿನ ಹೊರೆ ಬಿದ್ದಿದೆ. ಕರ್ನಾಟಕ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಕೇಂದ್ರದ ಪಾಲು ಕೇವಲ 16% ಮಾತ್ರ. ಆದರೆ ಬಿಜೆಪಿ ಆಡಳಿತ ರಾಜ್ಯಗಳಾದ ಬಿಹಾರಕ್ಕೆ 74%, ಉತ್ತರ ಪ್ರದೇಶಕ್ಕೆ 52%, ಮಹಾರಾಷ್ಟ್ರಕ್ಕೆ 29% ಕೇಂದ್ರ ಸರ್ಕಾರ ಕೊಡುಗೆ ನೀಡಿದೆ. ಇದು ಕರ್ನಾಟಕದ ಮೇಲೆ ಕೇಂದ್ರ ಸರ್ಕಾರದ ತೆರಿಗೆ ದಬ್ಬಾಳಿಕೆಯಲ್ಲವೇ? ಎಂದು ಕಿಡಿಕಾರಿದ್ದಾರೆ.

Share

Leave a comment

Leave a Reply

Your email address will not be published. Required fields are marked *