ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Bhadra Dam ಜ್ವಾಲೆ ಕಿಚ್ಚು: ಜನರಿಗೆ ತಪ್ಪು ಮಾಹಿತಿ ನೀಡಿಕೆ ವಿರೋಧಿಸಿ ಜೂ. 28ಕ್ಕೆ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಮುತ್ತಿಗೆ!

On: June 27, 2025 3:07 PM
Follow Us:
BHADRA DAM
---Advertisement---

SUDDIKSHANA KANNADA NEWS/ DAVANAGERE/ DATE-27-06-2025

ದಾವಣಗೆರೆ: ಭದ್ರಾ ಡ್ಯಾಂ (BHADRA DAM) ಬಲದಂಡೆ ಕಾಲುವೆಯಿಂದ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಅನುಮತಿ ನೀಡಿದ್ದು ಇದನ್ನು ಮುಚ್ಚಿಟ್ಟಿರುವ ಬಿಜೆಪಿ ಮುಖಂಡರು ಜಿಲ್ಲೆಯ ರೈತರು ಮತ್ತು ಸಾರ್ವಜನಿಕರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ತಪ್ಪು ಮಾಹಿತಿ ನೀಡುತ್ತಿರುವುದನ್ನು ವಿರೋಧಿಸಿ ಜೂನ್ 28ರಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುತ್ತಿಗೆ ಹಾಕಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ.

Read Also This Story: ಚನ್ನಗಿರಿಯ ಮುದ್ದೇನಹಳ್ಳಿಯಲ್ಲೊಂದು ವಿಲಕ್ಷಣ ಕೇಸ್: ಪುತ್ರಿ ಜೊತೆ ಮದುವೆ ಮಾಡಿಸಿದ್ದ ಅತ್ತೆ ಜೊತೆ ಅಳಿಯ ಜೂಟ್!

ಶನಿವಾರ ಬೆಳಗ್ಗೆ 11 ಗಂಟೆಗೆ ದಾವಣಗೆರೆಯ ಜಯದೇವ ವೃತ್ತದಿಂದ ಬಿಜೆಪಿ ಕಚೇರಿಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಡಿ.ಜಿ.ಶಾಂತನಗೌಡ, ಕೆ.ಎಸ್.ಬಸವಂತಪ್ಪ,
ದೇವೆಂದ್ರಪ್ಪ, ಶಿವಗಂಗಾ ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಚ್‍.ಬಿ. ಮಂಜಪ್ಪ, ಮಾಜಿ ಶಾಸಕ ಎಸ್. ರಾಮಪ್ಪ, ಹರಿಹರ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮತ್ತು ಕೆಪಿಸಿಸಿ ಸದಸ್ಯ ಮುದೇಗೌಡ್ರು ಗಿರೀಶ್ ನೇತೃತ್ವದಲ್ಲಿ ಮುತ್ತಿಗೆ ಹಾಕಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಪರಶುರಾಮ್, ಜಿ.ಸಿ. ನಿಂಗಪ್ಪ, ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ಅಬಿದಾಲಿ, ಎಲ್.ಬಿ.ಹನುಮಂತಪ್ಪ ಭಾಗವಹಿಸಲಿದ್ದಾರೆ.

Read AlsoThis Story: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರೇಣುಕಾಚಾರ್ಯ ಕೋಟ್ಯಂತರ ರೂ. ಪಡೆದಿದ್ದಕ್ಕೆ ದಾಖಲೆ ಇದೆ: ಶಿವಗಂಗಾಬಸವರಾಜ್ ಸ್ಫೋಟಕ ಆರೋಪ!

ಜಿಲ್ಲೆಯ ರೈತರು, ರೈತ ಒಕ್ಕೂಟದ ಸದಸ್ಯರು, ಜಿಲ್ಲಾ ಕಿಸಾನ್ ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು, ಸಂಸದರು, ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಕೆಪಿಸಿಸಿ ಸದಸ್ಯರು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶಿತ ಸದಸ್ಯರು, ಗ್ಯಾರಂಟಿ ಜಿಲ್ಲಾ ಮತ್ತು ತಾಲೂಕು ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಾರ್ಮಿಕರ, ವೈದ್ಯರು, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ, ಜವಾಹರ್ ಬಾಲ್ ಮಂಚ್, ರಾಜೀವ್‍ಗಾಂಧಿ ಪಂಚಾಯತ್ ರಾಜ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ / ತಾಲ್ಲೂಕು, ಎಪಿಎಂಸಿ ಮತ್ತು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ ಎಂದು ಜಿಲ್ಲಾ
ದಿನೇಶ್ ಕೆ.ಶೆಟ್ಟಿ ಹೇಳಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment