SUDDIKSHANA KANNADA NEWS/ DAVANAGERE/ DATE-27-06-2025
ದಾವಣಗೆರೆ: ಭದ್ರಾ ಡ್ಯಾಂ (Bhadra Dam)ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅನುಮತಿ ಮೇರೆಗೆ ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟ್ ಅಳವಡಿಕೆ ಕಾಮಗಾರಿ ಕೈಗೊಳ್ಳಬೇಕಾಗಿದೆ.
READ ALSO THIS STORY:ಭದ್ರಾ ಡ್ಯಾಂ ನೀರಿನ ಮಟ್ಟ ಭರ್ಜರಿ ಏರಿಕೆ: ಜಲಾಶಯ ಭರ್ತಿಗೆ ಬೇಕು ಕೇವಲ 26.1ಅಡಿ!
ಇದರಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಎಡದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಾಗದು. ಆದ್ದರಿಂದ ನಾಲಾ ವ್ಯಾಪ್ತಿಯ ರೈತರು ನೀರಾವರಿ ಆಶ್ರಿತ ಬೆಳೆಗಳನ್ನು ಬೆಳೆಯಬಾರದೆಂದು ಭದ್ರಾ ಜಲಾಶಯದ ಅಧೀಕ್ಷಕ ಇಂಜಿನಿಯರ್ ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೇಟ್ ಅಳವಡಿಕೆ ಕೆಲಸ ಸುಮಾರು ಒಂದೂವರೆ ತಿಂಗಳ ಕಾಲ ನಡೆಯಲಿದ್ದು ಎಡದಂಡೆ ನಾಲೆಯಿಂದ ಯಾವುದೇ ನೀರಾವರಿ ಬೆಳೆಗಳಿಗೆ ನೀರು ಬಿಡುವುದಿಲ್ಲ. ಆದ್ದರಿಂದ ಈ ನಾಲೆಯ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ಸೇರಿದಂತೆ ಯಾವುದೇ ನೀರಾವರಿ ಆಶ್ರಿತ ಬೆಳೆಗಳನ್ನು ಹಾಕಬಾರದೆಂದು ತಿಳಿಸಿದ್ದಾರೆ.