ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ನೀರು ಪೂರೈಕೆ: ಸಿದ್ದೇಶ್ವರ, ಬಿ. ಪಿ. ಹರೀಶ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ

On: June 23, 2025 6:23 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-23-06-2025

ದಾವಣಗೆರೆ: ಭದ್ರಾ ಡ್ಯಾಂ ಬಲದಂಡೆ ನಾಲೆ ಸೀಳಿ ನೀರು ಪೂರೈಕೆ ವಿರೋಧಿಸಿ ಮಾಜಿ ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಮತ್ತು ಹರಿಹರ ಶಾಸಕ ಬಿ. ಪಿ. ಹರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ದಾವಣಗೆರೆ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಭದ್ರಾ ಜಲಾಶಯದ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು, ತರೀಕೆರೆ ಹಾಗೂ ಹೊಸದುರ್ಗ ನಗರಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ 30ಕ್ಯೂಸೆಕ್ ನೀರು ಹರಿಸುವ ಯೋಜನೆಯನ್ನು ಸರ್ಕಾರ ಅತ್ಯಂತ ಗುಪ್ತವಾಗಿ ಕಾಮಗಾರಿಯನ್ನು ಆರಂಭಿಸಲು ಎಲ್ಲ ಸಿದ್ಧತೆಯನ್ನು ಮಾಡಿಕೊಂಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಹೊಸದುರ್ಗ ಮತ್ತು ತರೀಕೆರೆ ಶಾಸಕರ ನೇತೃತ್ವದಲ್ಲಿ ಸಭೆಯನ್ನು ಇಂದು ಕರೆಯಲಾಗಿತ್ತು. ವಾಸ್ತವವಾಗಿ ಭದ್ರಾನಾಲಾ ವ್ಯಾಪ್ತಿಯ ಶಾಸಕರ ಸಭೆ ಕರೆದು ಈ ಬಗ್ಗೆ ಅಭಿಪ್ರಾಯ ಕೇಳಬೇಕಿತ್ತು. ಆದರೆ ಸರ್ಕಾರ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳು ಅತ್ಯಂತ ಗುಪ್ತವಾಗಿ ಈ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದಾರೆ. ಈಗಾಗಲೇ ಭದ್ರಾನಾಲಾ ವ್ಯಾಪ್ತಿಯ ಹೊನ್ನಾಳಿ, ಹರಪನಹಳ್ಳಿ, ದಾವಣಗೆರೆ, ಚನ್ನಗಿರಿ ಕೊನೆಭಾಗದ ರೈತರು ನೀರು ಹಾಯಿಸಿಕೊಳ್ಳಲು ಕಷ್ಟಕರವಾದ ಸ್ಥಿತಿ ಇದೆ ಎಂದು ತಿಳಿಸಿದರು.

ಕಳೆದ 20 ವರ್ಷಗಳಿಂದ ಕೊನೆ ಭಾಗದ ರೈತರು ನಾಲಾ ಅವಲಂಬನೆಯನ್ನೇ ಕೈ ಬಿಟ್ಟಿದ್ದಾರೆ. ಇಂಥಹ ಸಂದರ್ಭದಲ್ಲಿ ರಾಜ್ಯ ಸರ್ಕಾರ 30 ಕ್ಯೂಸೆಕ್ ನೀರನ್ನು ತರೀಕೆರೆ, ಚಿಕ್ಕಮಗಳೂರು ಹಾಗೂ ಹೊಸದುರ್ಗ ನಗರಗಳಿಗೆ ಕೊಂಡೊಯ್ಯಲು ಅನುಮತಿ ನೀಡಿ, ತರಾತುರಿಯಲ್ಲಿ ಅತ್ಯಂತ ಗೌಪ್ಯವಾಗಿ ಕಾಮಗಾರಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಕುಡಿಯುವ ನೀರಿಗೆ ನಮ್ಮ ವಿರೋಧವಿಲ್ಲ, ಆದರೆ ಭದ್ರಾ ಅಚ್ಚುಕಟ್ಟು ಪ್ರದೇಶದ ಜನರಿಗೆ ನೀರಾವರಿ ಇಲಾಖೆ ಸಮರ್ಪಕವಾಗಿ ನೀರು ಕೊಡುತ್ತಿಲ್ಲ. ಇದೀಗ 30 ಕ್ಯೂಸೆಕ್ ನೀರನ್ನು ಕೊಟ್ಟಿದ್ದೇ ಆದಲ್ಲಿ. ಈಗಾಗಲೇ ಶೇ. 40 ರಷ್ಟು ಅಚ್ಚುಕಟ್ಟು ಪ್ರದೇಶ ಕಳೆದುಕೊಂಡಿರುವ
ರೈತರು ಕ್ರಮೇಣ ಹರಪನಹಳ್ಳಿ, ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನ ಜಮೀನುಗಳಿಗೆ ಭದ್ರಾ ನೀರು ಕಣ್ಣೀರಾಗುವುದರಲ್ಲಿ ಅನುಮಾನವಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ನದಿಯಿಂದ ನೀರು ಕೊಂಡೊಯ್ಯಲು ನಮ್ಮ ಅಭ್ಯಂತರವಿಲ್ಲ. ಇದಕ್ಕೆ ನಾವು ಕೂಡ ಸಹಕಾರ ನೀಡುತ್ತೇವೆ. ಆದರೆ ಯಾವುದೇ ಕಾರಣಕ್ಕೂ ನಾಲೆಯಿಂದ ನೀರು ಕೊಂಡೊಯ್ಯಲು ಬಿಡುವುದಿಲ್ಲ. ಸದರಿ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡಲು ಅಗತ್ಯ ಕ್ರಮಕೈಗೊಳ್ಳುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪ್ರತಿಭಟಿಸಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಹನಗವಾಡಿ ವೀರೇಶ್, ಯಶವಂತ್ ಜಾಧವ್, ಎನ್. ಇ. ಜೀವನಮೂರ್ತಿ, ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ರಾಜ್ಯ ಎಸ್.ಟಿ. ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ದೂಡಾ ಮಾಜಿ ಅಧ್ಯಕ್ಷರಾದ ರಾಜನಹಳ್ಳಿ ಶಿವಕುಮಾರ್, ದೇವರಮನಿ ಶಿವಕುಮಾರ್, ಎ.ವೈ. ಪ್ರಕಾಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅಣ್ಣೇಶ್ ಕೊಮ್ಮಾರನಹಳ್ಳಿ, ಹರಿಹರ ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್ ಹಿಂಡಸಘಟ್ಟ, ಮುಖಂಡರಾದ ಶಾಂತರಾಜ್ ಪಾಟೀಲ್, ಮುರುಗೇಶ್ ಆರಾಧ್ಯ, ನಗರಸಭೆ ಮಾಜಿ ಅಧ್ಯಕ್ಷ ಶಿವನಹಳ್ಳಿ ರಮೇಶ್, ಯುವಮೋರ್ಚಾ ರಾಜ್ಯ ಉಪಾಧ್ಯಕ್ಷ ಜಿ.ಎಸ್. ಶ್ಯಾಮ್, ಮಾಜಿ ಮೇಯರ್ ವಸಂತ್‌ಕುಮಾರ್, ಹೆಚ್.ಎನ್. ಶಿವಕುಮಾರ್, ಶಿವರಾಜ್‌ಪಾಟೀಲ್, ಸಿದ್ದೇಶ್, ಸುರೇಶ್ ಗಂಡುಗಾಳೆ, ಜಯಪ್ರಕಾಶ್, ಹೇಮಂತ್‌ಕುಮಾರ್, ದೊಗ್ಗಳ್ಳಿ ವೀರೇಶ್, ಸಂಗನಗೌಡ್ರು, ಅನೀಲ್ ಕತ್ತಲಗೆರೆ, ಶ್ಯಾಗಲೆ ದೇವೇಂದ್ರಪ್ಪ, ಅಣಜಿ ಗುಡ್ಡೇಶ್, ವಿಜಯ್ ಕುಮಾರ್, ಹೆಮ್ಮನಬೇತೂರು ಶಶಿಧರ್, ಕಂದನಕೋವಿ ಹನುಮಂತಪ್ಪ, ಮೆಳ್ಳೆಕಟ್ಟೆ ಹನುಮಂತಪ್ಪ, ಆಲೂರು ಅಜ್ಜಯ್ಯ, ಯೋಗೇಶ್ (ಯಗ್ಗಪ್ಪ), ರಾಜು ನೀಲಗುಂದ, ಶಿವನಗೌಡ ಪಾಟೀಲ್, ಕಿಶೋರ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ಭಾಗ್ಯ ಪಿಸಾಳೆ, ಗೌರಬಾಯಿ, ಮಂಜುಳಾ ಇಟ್ಟಿಗೆ, ನೀತಾ ನಂದೀಶ್, ಕಮಲ, ರೇಖಾ ಹಾಗೂ ಇನ್ನೂ ರೈತ ಬಾಂಧವರು, ಮುಖಂಡರು ಹಾಗೂ ಆನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment