ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Bhadra Dam: ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: 150 ಅಡಿ ದಾಟಿದ ಭದ್ರಾ ಡ್ಯಾಂ, 39 ಸಾವಿರ ಕ್ಯೂಸೆಕ್ ಗೂ ಹೆಚ್ಚು ಹರಿದು ಬರುತ್ತಿದೆ ನೀರು

On: July 24, 2023 4:46 AM
Follow Us:
Bhadra Dam
---Advertisement---

SUDDIKSHANA KANNADA NEWS/ DAVANAGERE/ DATE:24-07-2023

Bhadra Dam Today Water Level:

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು,. ಭದ್ರಾ ಡ್ಯಾಂ (Bhadra Dam) ನೀರಿನ ಮಟ್ಟ ಒಂದೇ ದಿನಕ್ಕೆ ನಾಲ್ಕು ಅಡಿ ಹೆಚ್ಚಾಗಿದೆ. ಭಾನುವಾರ 145 ಅಡಿ ಇದ್ದ ಭದ್ರಾ ಜಲಾಶಯದ ನೀರಿನ ಮಟ್ಟ ಇಂದು 150 ಅಡಿ ಗಡಿ ದಾಟಿದೆ. ಈ ಮೂಲಕ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಖುಷಿಗೆ ಕಾರಣವಾಗಿದೆ.

ಕಳೆದ ಕೆಲ ದಿನಗಳಿಂದ ಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಅದರಲ್ಲಿಯೂ ಕಳೆದ ಮೂರು ದಿನಗಳಿಂದ ಅಂತೂ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಹಳ್ಳ ಕೊಳ್ಳಗಳು, ಝರಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಡ್ಯಾಂಗೆ ಬರುತ್ತಿರುವ ನೀರು ಹೆಚ್ಚಾಗುತ್ತಿದೆ. ಶನಿವಾರ ಮತ್ತು ಭಾನುವಾರವಂತೂ ವರುಣ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಜೊತೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Bhadra Dam Today Water Level:

ಸೋಮವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಭದ್ರಾ ಡ್ಯಾಂ (Bhadra Dam) ನೀರಿನ ಮಟ್ಟ 149.5 ಅಡಿ ಇದೆ. 33.833 ಟಿಎಂಸಿ ನೀರು ಸಂಗ್ರಹವಿದ್ದು, ಇನ್ನೂ 29.653 ಟಿಎಂಸಿ ನೀರು ಹರಿದು ಬರಬೇಕಿದೆ. ಒಳಹರಿವು 39,348 ಕ್ಯೂಸೆಕ್ ಇದ್ದು, ಹೊರ ಹರಿವು 170 ಕ್ಯೂಸೆಕ್ ಇದೆ. ಕಳೆದ ವರ್ಷ 184.7 ಅಡಿ ಇತ್ತು.

ಈ ಸುದ್ದಿಯನ್ನೂ ಓದಿ: 

BIG BREAKING STORY, EYE VIRAS: ಸಾವಿರಾರು ಮಕ್ಕಳಿಗೆ ತಗುಲಿದೆ ಕಣ್ಣು ಬೇನೆ ( ಐ ವೈರಸ್): ಪೋಷಕರಿಗೆ ಮಕ್ಕಳ ತಜ್ಞ ವೈದ್ಯರು ಹೇಳಿದ್ದೇನು…? ತಂದೆ ತಾಯಿ ಓದಲೇಬೇಕಾದ ಸ್ಟೋರಿ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಸೇರಿದಂತೆ ಭದ್ರಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರು ಹರಿಯುವ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಮಳೆ ಕಡಿಮೆಯಾದರೂ ಮಂಗಳವಾರದ ಹೊತ್ತಿಗೆ 152 ಅಡಿ ನೀರು ಸಂಗ್ರಹವಾಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಭದ್ರಾ ಡ್ಯಾಂ (Bhadra Dam) ಅಥಾರಿಟಿ ಅಧಿಕಾರಿಗಳು ಹೇಳುವ ಪ್ರಕಾರ ಈ ವರ್ಷದಲ್ಲಿ ಪ್ರಥಮ ಬಾರಿ ಇಷ್ಟೊಂದು ಪ್ರಮಾಣದ ಕ್ಯೂಸೆಕ್ ನೀರು ಹರಿದು ಬಂದಿದೆ. ಮುಂಗಾರು ಮಳೆ ಕೈ ಕೊಟ್ಟರೂ ಈಗ ಮಳೆ ಚೆನ್ನಾಗಿಯೇ ಸುರಿಯುತ್ತಿದೆ. ಇನ್ನೂ ಮುಂಬರುವ ದಿನಗಳಲ್ಲಿ ಮಳೆ ಇದ್ದು ಡ್ಯಾಂ ತುಂಬುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Bhadra Dam Today Water Level:

ಕಳೆದ ವರ್ಷ ಇಷ್ಟೊತ್ತಿಗೆ ಬಹುತೇಕ ಡ್ಯಾಂ ತುಂಬುವ ಹಂತ ತಲುಪಿತ್ತು. ಆದ್ರೆ, ಈ ವರ್ಷ ಇನ್ನೂ ಡ್ಯಾಂ ತುಂಬಲು 36 ಅಡಿ ಬೇಕಿದೆ. ಕಳೆದ ಎರಡ್ಮೂರು ದಿನಗಳಿಂದ ಏಳು ಅಡಿ ನೀರು ಡ್ಯಾಂಗೆ ಹರಿದು ಬಂದಿದೆ. ಮಳೆ ಉತ್ತಮವಾಗಿ ಸುರಿದರೆ ಮತ್ತಷ್ಟು ನೀರು ಅಣೆಕಟ್ಟಿಗೆ ಬರುತ್ತದೆ. ಸದ್ಯದ ಮಾಹಿತಿ ಪ್ರಕಾರ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರಿದದೆ.

ಭದ್ರಾ ಡ್ಯಾಂ (Bhadra Dam) ಇಂದಿನ ನೀರಿನ ಮಟ್ಟ:

 

ದಿನಾಂಕ: 24 0 07 – 2023

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ: 149. 5 ಅಡಿ

ಎಂಎಸ್ ಎಲ್ : 121.41 ft

ಕೆಪಾಸಿಟಿ: 33.833-4.18=29.653 tmc

ಒಳಹರಿವು: 39348 ಕ್ಯೂಸೆಕ್

ಒಟ್ಟು ಹೊರಹರಿವು: 170 ಕ್ಯೂಸೆಕ್

ಕಳೆದ ವರ್ಷ ಇದೇ ದಿನ: 184. 7 ಅಡಿ

ಕೆಪಾಸಿಟಿ: 69.761 ಟಿಎಂಸಿ

Bhadra Water Level, Bhadra Dam, Bhadra Dam In Flow, Bhadra Dam Out Flow, Bhadra Dam Rain

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ದಾವಣಗೆರೆ

ದಾವಣಗೆರೆಯಲ್ಲಿ ಆನ್ ಲೈನ್ ಗೇಮ್ ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ಆತ್ಮಹತ್ಯೆ : ಪಿಎಂ, ಸಿಎಂ ಸೇರಿ ಹಲವರಿಗೆ ಬರೆದಿರುವ ಪತ್ರದಲ್ಲೇನಿದೆ?

ಕೋವಿಡ್ ಲಸಿಕೆಯಿಂದ ಹೃದಯಾಘಾತ: ಸುಳ್ಳು ಸುದ್ದಿ ಹಬ್ಬಿಸ್ತಿದ್ದಾರಂತೆ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ

ಸಿದ್ದರಾಮಯ್ಯರ ದುರಂಹಕಾರಿ ವರ್ತನೆಗೆ ಸ್ವಾಭಿಮಾನಿ ಅಧಿಕಾರಿ ಸ್ವಯಂನಿವೃತ್ತಿಗೆ ನಿರ್ಧಾರವಂತೆ!

ಕಾನೂನು

ತಕ್ಷಣ ಭೂಸ್ವಾಧೀನ ಕಾನೂನು ಹಿಂಪಡೆಯಿರಿ: ಸಿಎಂಗೆ ಪಂಡಿತಾರಾಧ್ಯ ಶ್ರೀಗಳ ಬಹಿರಂಗ ಮನವಿ

ಜುಲೈ 5ಕ್ಕೆ ಸಿದ್ಧಣ್ಣ ಜನುಮದಿನ: ಸರ್ವ ಜನಾಂಗದ ಪ್ರೀತಿಯ ಸರದಾರ.. ಬಿಜೆಪಿ ಕಟ್ಟಾಳು, ನಿಷ್ಠಾವಂತ ಡಾ. ಜಿ.ಎಂ. ಸಿದ್ದೇಶ್ವರ: ಬಾಡದ ಆನಂದರಾಜ್

ಈ ರಾಶಿಯವರಿಗೆ ಉನ್ನತ ಸ್ಥಾನ ಇದೆ ಆದರೆ ಪವರ್ ಇಲ್ಲ, ಈ ರಾಶಿಯ ದಂಪತಿಗಳಿಗೆ ಎಲ್ಲಾ ಇದ್ದರೂ ಮನಶಾಂತಿ ಇಲ್ಲ

Leave a Comment