ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಡ್ಯಾಂ (Bhadra Dam) ನೀರು ಸಂಗ್ರಹಿಸದೇ ನದಿಗೆ ನೀರು ಬಿಡುಗಡೆ ಯಾಕೆ: ಅಚ್ಚುಕಟ್ಟು ವ್ಯಾಪ್ತಿಯ ರೈತರ ಪ್ರಶ್ನೆಗೆ ಅಧಿಕಾರಿಗಳ ಸ್ಪಷ್ಟನೆ!

On: July 4, 2025 9:48 PM
Follow Us:
bhadra dam
---Advertisement---

SUDDIKSHANA KANNADA NEWS/ DAVANAGERE/ DATE_04-07_2025

ದಾವಣಗೆರೆ: ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಡ್ಯಾಂ (Bhadra Dam) ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದೆ. ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು.

READ ALSO THIS STORY: ಸೌಂದರ್ಯವೇ ಮುಳುವಾಯಿತೇ… ಅನೈತಿಕ ಸಂಬಂಧದ ಶಂಕೆಯಿಂದ ಕೌನ್ಸಿಲರ್‌ ಪತ್ನಿಯನ್ನೇ ಕೊಚ್ಚಿ ಕೊಂದ ಗಂಡ!

ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿರುತ್ತದೆ.

ಆದರೆ, ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡದೇ, ನದಿಗೆ ನೀರು ಬಿಡಲಾಗುತ್ತಿದೆ ಎಂದು ಕಛೇರಿಗೆ ಕರೆ ಮಾಡುತ್ತಿರುತ್ತಾರೆ. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು Rule Curve ಪಾಲನೆ ಮಾಡಲಾಗುತ್ತಿದೆ. Rule Curve ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ, ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಕೋರಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment