SUDDIKSHANA KANNADA NEWS/ DAVANAGERE/ DATE:04-07-2024
ದಾವಣಗೆರೆ: ಭದ್ರಾ ಜಲಾಶಯಕ್ಕೆ ಬರುತ್ತಿದ್ದ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಇಂದು 127 ಅಡಿ ತಲುಪಿರುವ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ 9 ಅಡಿ ನೀರು ಕಡಿಮೆ ಸಂಗ್ರಹ ಇದೆ.
ಕಳೆದ ವರ್ಷ ಹೋಲಿಸಿದರೆ ಈ ವರ್ಷ ನೀರಿನ ಸಂಗ್ರಹ ಕಡಿಮೆಯಾಗಿದೆ. ಸುಮಾರು 9 ಅಡಿಗಷ್ಟು ಕಡಿಮೆ ಇದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣವೂ ಕಡಿಮೆ ಆಗಿದೆ.
ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ 4908 ಕ್ಯೂಸೆಕ್ ಗೆ ಕಡಿಮೆಯಾಗಿದೆ. ಹೊರ ಹರಿವು 348 ಕ್ಯೂಸೆಕ್ ಇದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಇದೇ ರೀತಿ ಕಡಿಮೆ ಆದರೆ ಜಲಾಶಯದ ನೀರಿನ ಮಟ್ಟ 186 ಅಡಿ ತಲುಪುವುದು ಕಷ್ಟ ಎಂದು ಹೇಳಲಾಗುತ್ತಿದೆ. ಹವಾಮಾನ ಇಲಾಖೆಯು ಇನ್ನೂ ಒಂದು ವಾರ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮಳೆ ಮುಂದುವರಿದರೆ ಜಲಾಶಯಕ್ಕೆ ನೀರಿನ ಮಟ್ಟ ಹೆಚ್ಚು ಹರಿದು ಬರಲಿದೆ.
ಕಳೆದ ವರ್ಷ ಇದೇ ದಿನ ಭದ್ರಾ ಡ್ಯಾಂ ನೀರಿನ ಮಟ್ಟ 136.10 ಅಡಿ ನೀರಿನ ಸಂಗ್ರಹ ಇತ್ತು. ಈ ವರ್ಷ 127 ಅಡಿ ನೀರಿನ ಸಂಗ್ರಹ ಇದೆ. ಅಂದರೆ ಬರೋಬ್ಬರಿ 9 ಅಡಿ ನೀರಿಗಿಂತ ಕಡಿಮೆ ಸಂಗ್ರಹ ಇದೆ. ಇದು ಭದ್ರಾ ಅಚ್ಚುಕಟ್ಟುದಾರರ ಪ್ರದೇಶದ ರೈತರು, ಜನರ ಆತಂಕಕ್ಕೆ ಕಾರಣವಾಗಿದೆ.
ಭದ್ರಾ ಜಲಾಶಯದ ಒಳಹರಿವು ನಿನ್ನೆ 5324 ಕ್ಯೂಸೆಕ್ ಇತ್ತು. ಬುಧವಾರಕ್ಕೆ ಹೋಲಿಸಿದರೆ ಸ್ವಲ್ಪ ಮಾತ್ರ ಹೊರಹರಿವು ಕಡಿಮೆಯಾಗಿದೆ. ಭದ್ರಾ ಜಲಾಶಯದ ನೀರಿನ ಮಟ್ಟ 127 ಅಡಿ ಆಗಿದೆ.
ಮಂಗಳವಾರ ಭದ್ರಾ ಜಲಾಶಯಕ್ಕೆ 5243 ಕ್ಯೂಸೆಕ್ ಒಳಹರಿವಿದ್ದು, ಹೊರ ಹರಿವು 347 ಕ್ಯೂಸೆಕ್ ಇತ್ತು. ಇದು ಕೊಂಚ ಎನ್ನುವಷ್ಟು ಅಂದರೆ ಕೇವಲ ನೂರು ಕ್ಯೂಸೆಕ್ ಮಾತ್ರ ಬುಧವಾರ ಹೆಚ್ಚಳವಾಗಿತ್ತು. ಹೊರ ಹರಿವು 347 ಕ್ಯೂಸೆಕ್ ಇದೆ. ಚಿಕ್ಕಮಗಳೂರು ಜಿಲ್ಲೆ, ಭದ್ರಾ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆ ಕಡಿಮೆಯಾಗಿದೆ.ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಹಾಗಾಗಿ, ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಡ್ಯಾಂ ಭರ್ತಿಯಾಗಲು ಇನ್ನೂ 57 ಅಡಿ ನೀರು ಬರಬೇಕು.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತುಸು ಮಳೆ ಹೆಚ್ಚಾಗಿದ್ದು, ಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ತುಸು ಏರಿಕೆಯಾಗಿದೆ. ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣವೂ ಕಡಿಮೆ ಆಗಿದೆ.
ಭಾನುವಾರಕ್ಕೆ ಹೋಲಿಸಿದರೆ ಒಂದು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವು ಸೋಮವಾರಕ್ಕೆ ಜಾಸ್ತಿಯಾಗಿತ್ತು. ಜಲಾಶಯದ ನೀರಿನ ಮಟ್ಟ 125.5 ಅಡಿ ಏರಿಕೆಯಾಗಿತ್ತು. ಒಂದೇ ದಿನದಲ್ಲಿ ಒಂದು ಅಡಿ ನೀರಿಗೂ ಹೆಚ್ಚು ಹರಿದು ಬಂದಿತ್ತು. ಕಳೆದ ವರ್ಷ ಜಲಾಶಯದ ನೀರಿನ ಮಟ್ಟ 136.10 ಅಡಿ ನೀರಿತ್ತು. ಇಂದು ಜಲಾಶಯದ ನೀರಿನ ಮಟ್ಟ 126.3 ಅಡಿಗೆ ಏರಿಕೆಯಾಗಿದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಡ್ಯಾಂಗೆ ಬರುತ್ತಿರುವ ಒಳಹರಿವಿನ ಪ್ರಮಾಣ ಕಡಿಮೆ ಆಗಿದೆ. ಭದ್ರಾ ಡ್ಯಾಂ ನೀರಿನ ಮಟ್ಟ ಹೆಚ್ಚಾಗುತ್ತೆ ಎಂದುಕೊಂಡರೂ ಆಗಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 10 ಅಡಿ ನೀರು ಕಡಿಮೆ ಇದೆ. ಆದ್ರೆ, ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಳೆ ಮುಂದುವರಿದರೆ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಾಗಲಿದೆ. ಕಡಿಮೆಯಾದರೆ ಮತ್ತಷ್ಟು ಕುಸಿತ ಕಾಣಲಿದೆ. ಭದ್ರಾ ಡ್ಯಾಂ ತುಂಬಲು ಇನ್ನೂ 59.7 ಅಡಿ ನೀರು ಬರಬೇಕಿದೆ.
ಶನಿವಾರ ಮಳೆ ಕಡಿಮೆಯಾಗಿದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಕುಂಠಿತಗೊಂಡಿರುವ ಮಳೆಯಿಂದಾಗಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವಿನ ಪ್ರಮಾಣ ಭಾರೀ ಕಡಿಮೆಯಾಗಿತ್ತು. ಶುಕ್ರವಾರ 8650 ಕ್ಯೂಸೆಕ್ ಒಳಹರಿವಿತ್ತು. ಆದ್ರೆ, ಇಂದು ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ,. ಶನಿವಾರ 6376 ಕ್ಯೂಸೆಕ್ ಒಳಹರಿವಿತ್ತು. ಜಲಾಶಯದ ನೀರಿನ ಮಟ್ಟ 123.10 ಅಡಿ ಆಗಿತ್ತು.
ಭದ್ರಾ ಜಲಾನಯನ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗಿತ್ತು. ನಿನ್ನೆಗೆ ಹೋಲಿಸಿದರೆ ಇಂದು ಮಳೆ ಸ್ವಲ್ಪ ಜಾಸ್ತಿಯಾಗಿದೆ.ಗುರುವಾರ ನಾಲ್ಕು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬಂದಿತ್ತು. ಶುಕ್ರವಾರ ಎಂಟು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿತ್ತು. ಆದ್ರೆ, ನಿನ್ನೆ ಆರು ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಗೆ ಇಳಿದಿದೆ. ಇಂದು 3183ಕ್ಕೆ ಕುಸಿದಿತ್ತು.,
ಭದ್ರಾ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಬರೋಬ್ಬರಿ 13 ಅಡಿ ನೀರು ಕಡಿಮೆ ಸಂಗ್ರಹ ಇದ್ದು. ಇದು ಭದ್ರಾ ಅಚ್ಚುಕಟ್ಟುಪ್ರದೇಶ, ಶಿವಮೊಗ್ಗ ಹಾಗೂ ಚಿತ್ರದುರ್ಗದ ರೈತರು ಹಾಗೂ ಜನರಿಗೆ ಆತಂಕ ತಂದೊಡ್ಡಿತ್ತು. ಈಗ ಮಳೆಯಾಗುತ್ತಿರುವ ಕಾರಣ ರೈತರಲ್ಲಿ ಸ್ವಲ್ಪ ಮಟ್ಟಿಗೆ ನಿಟ್ಟುಸಿರುಬಿಡುವಂತಾಗಿದೆ. ಮಳೆ ಬಾರದೇ ಇದ್ದರೆ ಜಲಾಶಯದಲ್ಲಿ ಗರಿಷ್ಠ ನೀರಿನ ಮಟ್ಟ ಮುಟ್ಟುವುದು ಕಷ್ಟ ಎಂದು ಹೇಳಲಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಈ ತಿಂಗಳ ಕೊನೆಯ ವಾರ ಭಾರೀ ಮಳೆಯಾಗಲಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ ಇದೆ. ಇದೇ ರೀತಿಯಲ್ಲಿ ಮಳೆ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಲಿದೆ.
ಭದ್ರಾ ಡ್ಯಾಂ ನೀರಿನ ಮಟ್ಟ
-
ಭದ್ರಾ ಡ್ಯಾಂ ನೀರಿನ ಒಟ್ಟು ಸಂಗ್ರಹ: 186 ಅಡಿ
-
ದಿನಾಂಕ: -04-07-2024
-
ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ: 127 ಅಡಿ
-
ಕೆಪಾಸಿಟಿ: 18.983
-
ಒಳಹರಿವು: 4908 ಕ್ಯೂಸೆಕ್
-
ಒಟ್ಟು ಹೊರಹರಿವು: 348 ಕ್ಯೂಸೆಕ್
-
ಕಳೆದ ವರ್ಷ ಇದೇ ದಿನ: 136.10 ಅಡಿ