SUDDIKSHANA KANNADA NEWS/ DAVANAGERE/ DATE:14-07-2024
ದಾವಣಗೆರೆ: ಕಳೆದ ಒಂದು ವಾರದಿಂದಲೂ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಕುಂಠಿತವಾಗಿತ್ತು. ಆದ್ರೆ, ಶನಿವಾರ ಭಾರೀ ಮಳೆಯಾಗಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯದ ನೀರಿನ ಮಟ್ಟ 139.3 ಅಡಿಗೆ ಏರಿಕೆಯಾಗಿದೆ.
ಜಲಾಶಯಕ್ಕೆ 14570 ಕ್ಯೂಸೆಕ್ ಒಳಹರಿವಿದ್ದು ಒಂದೇ ದಿನಕ್ಕೆ ಸುಮಾರು ಹತ್ತು ಸಾವಿರದಷ್ಟು ಕ್ಯೂಸೆಕ್ ಹೆಚ್ಚಳವಾಗಿದೆ. ಜಲಾಶಯದ ಗರಿಷ್ಠ ಮಟ್ಟ 186 ಅಡಿ ಆಗಿದ್ದು, ಭರ್ತಿಯಾಗಲು 46.7 ಅಡಿ ಬೇಕಿದೆ. ಕಳೆದ ವರ್ಷ ಇದೇ ಭದ್ರಾ ಜಲಾಶಯದ ನೀರಿನ ಮಟ್ಟ141.2 ಅಡಿ ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಲಾಶಯದ ನೀರಿನ ಮಟ್ಟ 2 ಅಡಿ ನೀರು ಕಡಿಮೆ ಇದೆ. ಜಲಾನಯನ ಪ್ರದೇಶದಲ್ಲಿ ಇನ್ನೂ ಮಳೆ ಮುಂದುವರಿದರೆ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರಲಿದೆ.
ಶನಿವಾರ ಭದ್ರಾ ಡ್ಯಾಂಗೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಒಳಹರಿವು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು, ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 137.4 ಅಡಿ ಆಗಿತ್ತು.
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆಯೂ ಕಡಿಮೆಯಾಗಿದ್ದರಿಂದ ಜಲಾಶಯಕ್ಕೆ ಹರಿದು ಬರುತ್ತಿರುವ ಪ್ರಮಾಣವೂ ಕುಂಠಿತವಾಗಿತ್ತು. ಕೇವಲ 4870 ಕ್ಯೂಸೆಕ್ ಒಳಹರಿವಿದ್ದು, ಹೊರ ಹರಿವು 159 ಕ್ಯೂಸೆಕ್ ಇತ್ತು. ಆದ್ರೆ, ಈಗ 14570 ಕ್ಯೂಸೆಕ್ ಒಳಹರಿವಿದ್ದು, ಜಲಾಶಯದ ನೀರಿನ ಮಟ್ಟ ಸ್ವಲ್ಪ ಹೆಚ್ಚಳವಾಗಲಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 186 ಅಡಿ ಇದೆ. ಕಳೆದ ವರ್ಷ ಇದೇ ದಿನ 141. 1 ಅಡಿ ನೀರು ಸಂಗ್ರಹ ಇದ್ದು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಾಲ್ಕು ಅಡಿಗಳಷ್ಟು ಕಡಿಮೆ ಇದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗದಿದ್ದರೆ ಜಲಾಶಯಕ್ಕೆ ನೀರು ಬರುವುದು ಕಷ್ಟ. ಜುಲೈ 13ನೇ ತಾರೀಕು ಆದರೂ ಮಳೆ ಕಡಿಮೆಯಾಗಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ.
ಸುಮಾರು ಹತ್ತು ದಿನಗಳಿಂದ ಮಳೆ ಹೆಚ್ಚಾಗಿರಲಿಲ್ಲ. ಸಾಧಾರಣ ಮಳೆ ಸುರಿದ ಕಾರಣ ಜಲಾಶಯಕ್ಕೆ ಬರುತ್ತಿದ್ದ ಒಳಹರಿವಿನ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಲೇ ಇತ್ತು. ಆದ್ರೆ, ಇದೀಗ ಹದಿನಾಲ್ಕುವರೆ ಸಾವಿರ ಕ್ಯೂಸೆಕ್ ಹರಿದು ಬರುತ್ತಿರುವುದರು ರೈತರಿಗೆ ಸ್ವಲ್ಪ ಸಮಾಧಾನಕ್ಕೆ ಕಾರಣವಾಗಿದೆ.
ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಸ್ವಲ್ಪ ಕಡಿಮೆ ಸುರಿಯುತ್ತಿದ್ದರಿಂದ ಡ್ಯಾಂ ನೀರಿನ ಮಟ್ಟವೂ ಹೆಚ್ಚಾಗಿ ಏರಿಕೆಯಾಗುತ್ತಿರಲಿಲ್ಲ. ಈಗ ಒಂದೇ ದಿನ ಸುಮಾರು ಎರಡು ಅಡಿ ನೀರು ಹೆಚ್ಚಳವಾಗಿರುವುದು ಖುಷಿಯ ವಿಚಾರ.
ಕಳೆದ ಶನಿವಾರ ಮಳೆ ಸ್ವಲ್ಪ ಕಡಿಮೆಯಾಗಿತ್ತು. ಆದ್ರೆ, ಭದ್ರಾ ಜಲಾನಯನ, ಮಲೆನಾಡು ಪ್ರದೇಶದಲ್ಲಿ ಮಳೆ ಮುಂದವರಿದಿದ್ದು, ಸಾಧಾರಣ ಮಳೆಯಾಗುತ್ತಿದೆ. ಮಳೆಯು ಅಬ್ಬರಿಸಿ ಬೊಬ್ಬಿರಿದರೆ ಡ್ಯಾಂಗೆ ಹೆಚ್ಚಿನ ಪ್ರಮಾಣದ
ನೀರು ಹರಿದು ಬರಲಿದೆ. ಮಲೆನಾಡಿಲ್ಲಿ ಮಳೆಯ ಅಬ್ಬರ ಮತ್ತೆ ಸ್ವಲ್ಪ ಮಟ್ಟಿಗೆ ಜೋರಾಗಿದೆ.ಇದರಿಂದ ಒಳಹರಿವಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಭದ್ರಾ ಜಲಾಶಯದ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಬರೋಬ್ಬರಿ 13 ಅಡಿ ನೀರು ಕಡಿಮೆ ಸಂಗ್ರಹ ಇದ್ದು. ಇದು ಭದ್ರಾ ಅಚ್ಚುಕಟ್ಟುಪ್ರದೇಶ, ಶಿವಮೊಗ್ಗ ಹಾಗೂ ಚಿತ್ರದುರ್ಗದ ರೈತರು ಹಾಗೂ ಜನರಿಗೆ ಆತಂಕ ತಂದೊಡ್ಡಿತ್ತು. ಈಗ ಮಳೆಯಾಗುತ್ತಿರುವ ಕಾರಣ ರೈತರಲ್ಲಿ ಸ್ವಲ್ಪ ಮಟ್ಟಿಗೆ ನಿಟ್ಟುಸಿರುಬಿಡುವಂತಾಗಿದೆ. ಮಳೆ ಬಾರದೇ ಇದ್ದರೆ ಜಲಾಶಯದಲ್ಲಿ ಗರಿಷ್ಠ ನೀರಿನ ಮಟ್ಟ ಮುಟ್ಟುವುದು ಕಷ್ಟ ಎಂದು ಹೇಳಲಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಈ ತಿಂಗಳ ಕೊನೆಯ ವಾರ ಭಾರೀ ಮಳೆಯಾಗಲಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆ ಇದೆ. ಇದೇ ರೀತಿಯಲ್ಲಿ ಮಳೆ ಮುಂದುವರಿದರೆ ಜಲಾಶಯದ ನೀರಿನ ಮಟ್ಟ ಹೆಚ್ಚಳವಾಗಲಿದೆ.
ಭದ್ರಾ ಡ್ಯಾಂ ನೀರಿನ ಮಟ್ಟ
-
ಭದ್ರಾ ಡ್ಯಾಂ ನೀರಿನ ಒಟ್ಟು ಸಂಗ್ರಹ: 186 ಅಡಿ
-
ದಿನಾಂಕ: 14- 07-2024
-
ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ: 139.03 ಅಡಿ
-
ಕೆಪಾಸಿಟಿ: 26..379 ಟಿಎಂಸಿ
-
ಒಳಹರಿವು: 14570 ಕ್ಯೂಸೆಕ್
-
ಒಟ್ಟು ಹೊರಹರಿವು: 161 ಕ್ಯೂಸೆಕ್
-
ಕಳೆದ ವರ್ಷ ಇದೇ ದಿನ: 141.02 ಅಡಿ
-
ಕೆಪಾಸಿಟಿ: 27.693 ಟಿಎಂಸಿ