SUDDIKSHANA KANNADA NEWS/ DAVANAGERE/ DATE:26-09-2023
ದಾವಣಗೆರೆ: 2023-24 ನೇ ಸಾಲಿನಲ್ಲಿ ಭದ್ರಾ ಜಲಾಶಯ(Bhadra Dam)ದ ಮುಂಗಾರು ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ನಾಲೆಗಳಿಗೆ ನೀರನ್ನು ಸರದಿಯನ್ವಯ ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ
ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಸುಜಾತ ತಿಳಿಸಿದ್ದಾರೆ.
Read Also This Story:
ಅಡಿಕೆ (Areca nut) ಬೆಳೆಗಾರರಿಗೆ ಕಹಿ ಸುದ್ದಿ, ಮತ್ತೆ ಕುಸಿದ ಅಡಿಕೆ ಧಾರಣೆ: ಮತ್ತೆ ಎಷ್ಟು ಕಡಿಮೆ ಆಯ್ತು ಗೊತ್ತಾ…?
ಭದ್ರಾ ಬಲದಂಡೆ ನಾಲೆಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 15 ರವರೆಗೆ ಒಟ್ಟು 20 ದಿನಗಳು ಹಾಗೂ ಅಕ್ಟೋಬರ್ 26 ರಿಂದ ನವೆಂಬರ್ 17 ರವರೆಗೆ ಒಟ್ಟು 23 ದಿನಗಳು ನೀರನ್ನು ಹರಿಸಲಾಗುವುದು.
ಭದ್ರಾ ಎಡದಂಡೆ ನಾಲೆಗಳಿಗೆ ಈಗಾಗಲೇ ನೀರನ್ನು ಹರಿಸಲಾಗಿದ್ದು, ಅಕ್ಟೋಬರ್ 1 ರವರೆಗೆ ಒಟ್ಟು 15 ದಿನಗಳು ನೀರನ್ನು ಹರಿಸಲಾಗುತ್ತದೆ. ನಂತರ ಅಕ್ಟೋಬರ್ 12 ರಿಂದ 26 ರವರೆಗೆ ಒಟ್ಟು 15 ದಿನಗಳು ಹಾಗೂ ನವೆಂಬರ್ 6 ರಿಂದ 17 ರವರೆಗೆ ಒಟ್ಟು 12 ದಿನಗಳು ನೀರನ್ನು ಹರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭದ್ರಾ ಜಲಾಶಯ(Bhadra Damದಿಂದ ನಾಲೆಯಲ್ಲಿ ನೂರು ದಿನಗಳ ಕಾಲ ಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ರೈತ ಒಕ್ಕೂಟದ ನೇತೃತ್ವದಲ್ಲಿ ದಾವಣಗೆರೆ ಬಂದ್ ನಡೆಸಿತ್ತು. ಈ ಬಂದ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿತ್ತು. ಪ್ರತಿಭಟನೆಯ
ಕಾವು ಜೋರಾಗಿತ್ತು. ಮಾತ್ರವಲ್ಲ, ನಗರದಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ದಾವಣಗೆರೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಡ್ಯಾಂ(Bhadra Damನಿಂದ ನೀರು ಹರಿಸಲು ನಿರ್ಧರಿಸಲಾಗಿದೆ. ಇದು ರೈತರಿಗೆ
ಖುಷಿ ತಂದಿದೆ.
ಭದ್ರಾ ಡ್ಯಾಂ (Bhadra Damನೀರು ಅವಲಂಬಿತವಾಗಿರುವ ಭದ್ರಾ ಅಚ್ಚುಕಟ್ಟು ಪ್ರದೇಶ ಶೇಕಡಾ 70 ರಷ್ಟು ಇದೆ. ಈಗಾಗಲೇ ಭತ್ತ ಬೆಳೆದಿರುವ ರೈತರು ಕಂಗಾಲಾಗಿದ್ದರು. ಕಳೆದ ನಾಲ್ಕೈದು ದಿನಗಳ ಹಿಂದೆ ಡ್ಯಾಂನಿಂದ ನೀರು ಸ್ಥಗಿತಗೊಳಿಸಲಾಗಿತ್ತು. ಪರಿಹಾರ ಬೇಡ, ನಮಗೆ ಭದ್ರಾ ಡ್ಯಾಂ(Bhadra Damನಿಂದ ನೀರು ಹರಿಸಲೇಬೇಕು ಎಂದು ರೈತರು ಪಟ್ಟುಹಿಡಿದಿದ್ದರು. ಜೊತೆಗೆ ಈಗಾಗಲೇ ಭತ್ತ ನಾಟಿ ಮಾಡಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದು, ಮಳೆಯೂ ಸುರಿದಿಲ್ಲ. ಈ ಕಾರಣಕ್ಕೆ ಸರ್ಕಾರವು ನೀರು ಹರಿಸಲು ನಿರ್ಧರಿಸಿದೆ.
ಭಾರತೀಯ ರೈತ ಒಕ್ಕೂಟವು ಕರೆ ಕೊಟ್ಟಿದ್ದ ಬಂದ್ ಗೆ ಬಿಜೆಪಿ, ವಿವಿಧ ಸಂಘಟನೆಗಳು, ವಿವಿಧ ಪಕ್ಷಗಳು ಸಾಥ್ ಕೊಟ್ಟಿದ್ದವು. ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಎರಡು ದಿನಗಳಲ್ಲಿ ಸಮಸ್ಯೆ ಪರಿಹಾರವಾಗಲಿದೆ. ನಾನು ಇರುವವರೆಗೆ ಭತ್ತ ಬೆಳೆದವರು ಆತಂಕ ಪಡಬೇಕಿಲ್ಲ ಎಂದು ಭರವಸೆ ಕೊಟ್ಟಿದ್ದರು.
ಪ್ರತಿಭಟನೆ ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರವಾಗುವುದನ್ನು ಅರಿತ ನೀರಾವರಿ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಸೆಪ್ಟಂಬರ್ 26ರಿಂದ ಅಕ್ಟೋಬರ್ 15ರವರೆಗೆ ಅಂದರೆ 20 ದಿನಗಳ ಕಾಲ ನೀರು ಹರಿಸಲು ತೀರ್ಮಾನಿಸಿರುವುದು ರೈತರಿಗೆ ಖುಷಿ ತಂದಿದೆ. ಈಗಾಗಲೇ 40 ದಿನಗಳ ಕಾಲ ನೀರು ಹರಿಸಲಾಗಿತ್ತು. ಈಗ 43 ದಿನಗಳ ಕಾಲ ನೀರು ಹರಿಸಲು ಮುಂದಾಗಿರುವುದು ಸಮಾಧಾನ ತಂದಿದೆ.