ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭದ್ರಾ ಡ್ಯಾಂ (bhadra dam)ನಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸಲಾಗುವುದು.
ಭದ್ರಾ ಜಲಾಶಯ ಯೋಜನೆ ಅಚ್ಚುಕಟ್ಟು ವ್ಯಾಪ್ತಿಯ ಮುಂಗಾರು ಬೆಳೆಗಳಿಗೆ ಭದ್ರಾ ಬಲದಂಡೆ ನಾಲೆಗೆ ಜುಲೈ 22 ರ ರಾತ್ರಿಯಿಂದ ನೀರನ್ನು ಹರಿಸಲಾಗಿದೆ ಮತ್ತು ಎಡದಂಡೆ ನಾಲೆಗೆ ನೀರು ಹರಿಸುವ ಕುರಿತು ಶೀಘ್ರದಲ್ಲಿಯೇ ದಿನಾಂಕವನ್ನು ಪ್ರಕಟಿಸಲಾಗುವುದು.
READ ALSO THIS STORY: ಪಕ್ಷ ನಿಷ್ಠೆ, ಶ್ರಮಕ್ಕೆ ಪ್ರತಿಫಲ: ರಾಷ್ಟ್ರಮಟ್ಟದಲ್ಲಿ ಜನಮನ್ನಣೆ ಪಡೆದ “ಯುವನಾಯಕ”ನಿಗೆ ಪ್ರಮುಖ ಹುದ್ದೆ ಜವಾಬ್ದಾರಿ
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ
ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತ , ಬಿ.ಆರ್ ಪ್ರಾಜೆಕ್ಟ್ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.