SUDDIKSHANA KANNADA NEWS/ DAVANAGERE/ DATE-07-05-2025
ದಾವಣಗೆರೆ: ಭದ್ರಾ ಜಲಾಶಯದ ಅಚ್ಚುಕಟ್ಟುದಾರ ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ.10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ.18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು.
ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ.
ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಪ್ರಸಕ್ತ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್ ಗಳು ನಿರ್ಧರಿಸಿರುವ ಆಂತರಿಕ ಸರದಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು
ಅಧೀಕ್ಷಕ ಇಂಜಿನಿಯರ್ ತಿಳಿಸಿದ್ದಾರೆ.