SUDDIKSHANA KANNADA NEWS/ DAVANAGERE/ DATE_11-07_2025
ದಾವಣಗೆರೆ: ಭದ್ರಾ ಡ್ಯಾಂ (Bhadra Dam) ನೀರಿನ ಮಟ್ಟವು ದಿನಕಳೆದಂತೆ ಏರಿಕೆಯಾಗಿದ್ದು, ಒಳಹರಿವು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಭದ್ರಾ ಡ್ಯಾಂನಿಂದ ಇಂದು ಸಂಜೆ ನಾಲ್ಕು ಗಂಟೆಯಿಂದ 2000 ಕ್ಯೂಸೆಕ್ ಹೊರಬಿಡಲಾಗುತ್ತಿದೆ. ಜಲಾಶಯದ ಕ್ರಸ್ಟ್ ಗೇಟ್ ಗಳ ತೆರೆದು ನೀರು ಹೊರಬರುತ್ತಿದ್ದಂತೆ ಜನರು ಕಣ್ತುಂಬಿಕೊಂಡರು.
ಭದ್ರಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯವು ಯಾವುದೇ ಸಂದರ್ಭದಲ್ಲಿಯಾದರೂ ತುಂಬುವ ಸಂಭವವಿರುವುದರಿಂದ ಜಲಾಶಯದ
ಸುರಕ್ಷತೆಗಾಗಿ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ ಗಳ ಮೂಲಕ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ನದಿ ಪಾತ್ರದಲ್ಲಿ ಸಾರ್ವಜನಿಕರು ಓಡಾಡುವುದು, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚಿಸಲಾಗಿದೆ.ಭದ್ರಾ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಬಿ. ಆರ್. ಪ್ರಾಜೆಕ್ಟ್ ನ ಬಿ ಆರ್ ಎಲ್ ಬಿ ಸಿ ಉಪವಿಭಾಗ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದ್ದಾರೆ.