SUDDIKSHANA KANNADA NEWS/ DAVANAGERE/ DATE:12-01-2024
ದಾವಣಗೆರೆ: 2023-24 ನೇ ಸಾಲಿನ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭತ್ತ, ಕಬ್ಬು, ಅರೆ ನೀರಾವರಿ ಬೆಳೆ ಮುಂತಾದ ಯಾವುದೇ ರೀತಿಯ ಬೆಳೆಗಳಿಗೆ ನೀರನ್ನು ಹರಿಸದಿರಲು ಹಾಗೂ ಬೆಳೆದು ನಿಂತಿರುವ ಬೆಳೆ, ಜನ-ಜಾನುವಾರು, ಕುಡಿಯುವ ನೀರು ಮತ್ತು ಪರಿಸರ ಸಮತೋಲನ ಕಾಪಾಡಿಕೊಳ್ಳಲು ಆನ್ ಅಂಡ್ ಆಫ್ ಪದ್ದತಿಯಲ್ಲಿ ನಾಲೆಗಳಲ್ಲಿ ನೀರು ಹರಿಸಲು ನಿರ್ಧರಿಸಲಾಗಿದೆ.
ಬಲದಂಡೆ ನಾಲೆಗೆ ಜನವರಿ ರಿಂದ ಒಟ್ಟು 53 ದಿನಗಳಿಗೆ ಹಾಗೂ ಎಡದಂಡೆ ನಾಲೆಗೆ ಜ.10ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲು ತೀರ್ಮಾನಿಸಲಾಯಿತು.
ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಭದ್ರಾ ಎಡದಂಡೆ ನಾಲೆಯಲ್ಲಿ ಜ.10 ರಿಮದ 25 ರವರೆಗೆ 16 ದಿನ ನೀರು ಹರಿಸುವುದು, ಜ.26 ರಿಂದ ಫೆ.9 ರವರೆಗೆ 15 ದಿನ ನೀರು ನಿಲ್ಲಿಸುವುದು. ಫೆ.10 ರಿಂದ 26 ರವರೆಗೆ 17 ದಿನ ನೀರು ಹರಿಸುವುದು, ಫೆ.27 ರಿಂದ ಮಾ.12 ರವರೆಗೆ 15 ದಿನ ನೀರು ನಿಲ್ಲಿಸುವುದು. ಮಾ.3 ರಿಂದ 30 ರವರೆಗೆ 18 ನೀರು ಹರಿಸುವುದು ಮಾ.31 ರಿಂದ ಏ.14 ರವರೆಗೆ 15 ದಿನ ನೀರು ನಿಲ್ಲಿಸುವುದು. ಏ.15 ರಿಂದ ಮೇ.3 ರವರೆಗೆ 19 ದಿನಗಳ ನೀರು ಹರಿಸಲಾಗುವುದು.
ಭದ್ರಾ ಬಲದಂಡೆ ನಾಲೆಯಲ್ಲಿ ಜ.15 ರಿಂದ 26 ರವರೆಗೆ 12 ದಿನ ನೀರು ಹರಿಸುವುದು, ಜ.27 ರಿಂದ ಫೆ.15 ರವರೆಗೆ 20 ದಿನ ನೀರು ನಿಲ್ಲಿಸುವುದು. ಫೆ.16 ರಿಂದ 28 ರವರೆಗೆ 13 ದಿನ ನೀರು ಹರಿಸುವುದು, ಫೆ.29 ರಿಂದ ಮಾ.19 ರವರೆಗೆ 20 ದಿನ ನೀರು ನಿಲ್ಲಿಸುವುದು. ಮಾ.20 ರಿಂದ ಏ.2 ರವರೆಗೆ 14 ದಿನ ನೀರು ಹರಿಸುವುದು, ಏ.3 ರಿಂದ 22 ರವರೆಗೆ 20 ದಿನಗಳಿಗೆ ನೀರು ನಿಲ್ಲಿಸುವುದು. ಏ.23 ರಿಂದ ಮೇ 5 ರವರೆಗೆ 14 ದಿನಗಳ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.