ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

Bhadra Dam: ಭದ್ರಾ ಜಲಾನಯನ ಪ್ರದೇಶದಲ್ಲಿ ಕುಸಿದ ಮಳೆ: 13 ಸಾವಿರ ಕ್ಯೂಸೆಕ್ ಇಳಿಕೆ: ಭದ್ರಾ ಡ್ಯಾಂ ನೀರಿನ ಮಟ್ಟ 159.6, ಡ್ಯಾಂ ಭರ್ತಿಗೆ ಬೇಕು 26.4 ಅಡಿ ನೀರು

On: July 28, 2023 4:30 AM
Follow Us:
Bhadra Dam Today Water Level
---Advertisement---

SUDDIKSHANA KANNADA NEWS/ DAVANAGERE/ DATE:28-07-2023

ದಾವಣಗೆರೆ: ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಕುಂಠಿತಗೊಂಡಿದೆ. ಭದ್ರಾ ಡ್ಯಾಂ (Bhadra Dam) ಗೆ ಹರಿದು ಬರುತ್ತಿದ್ದ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ನಿನ್ನೆ 28 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ಒಳಹರಿವಿತ್ತು. ಆದ್ರೆ, ಇಂದು 16041 ಕ್ಯೂಸೆಕ್ ಮಾತ್ರ ಒಳ ಹರಿವಿದೆ. ಸುಮಾರು 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಕಡಿಮೆಯಾಗಿದೆ. ಭದ್ರಾ ಡ್ಯಾಂ (Bhadra Dam) ಗೆ ಒಂದೂವರೆ ಅಡಿ ಮಾತ್ರ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿತ್ತು. ಆದ್ರೆ, ನಿನ್ನೆ ಮಳೆ ಭಾರೀ ಪ್ರಮಾಣದಲ್ಲಿ ಕುಂಠಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿದ್ದ ನೀರೂ ಸಹ ಕಡಿಮೆಯಾಗಿದೆ.

ಈ ಸುದ್ದಿಯನ್ನೂ ಓದಿ:

Rain: ಮಳೆ ಮಳೆ… ಮಳೆನಾಡಾದ ಬೆಣ್ಣೆನಗರಿ, ಈ ಕ್ರಮಗಳ ಅನುಸರಿಸಿದರೆ ರೋಗಗಳಿಂದ ದೂರ ದೂರ ಗ್ಯಾರಂಟಿ… ಹಾಗಾದ್ರೆ ಓದಿ ಅನುಸರಿಸಿ ತಡಮಾಡ್ಬೇಡಿ…

ಕಳೆದ ಎರಡು ದಿನಗಳಿಂದ ಮಳೆ ಕುಂಠಿತಗೊಂಡಿದ್ದರೂ ಜಲಾಶಯಕ್ಕೆ ನೀರಿನ ಪ್ರಮಾಣದಲ್ಲಿ ಹೆಚ್ಚಾಗಿಯೇ ಇತ್ತು. ಕಳೆದ ಎರಡು ದಿನಗಳ ಹಿಂದೆ 24 ಸಾವಿರ ಕ್ಯೂಸೆಕ್ ಒಳಹರಿವು ಇತ್ತು. ಗುರುವಾರ 28 ಸಾವಿರಕ್ಕೂ ಹೆಚ್ಚು ಅಧಿಕ ಒಳಹರಿವಿತ್ತು. ಆದ್ರೆ, ಶುಕ್ರವಾರ ಬೆಳಿಗ್ಗೆ ಆರು ಗಂಟೆಯ ಹೊತ್ತಿಗೆ 16 ಸಾವಿರಕ್ಕೆ ಇಳಿಕೆಯಾಗಿದೆ.

ವರುಣನ ಆರ್ಭಟ ಕಡಿಮೆಯಾದ ಪರಿಣಾಮ ಹಳ್ಳ ಕೊಳ್ಳಗಳು, ಕೆರೆ ಕಟ್ಟೆಗಳಿಗೆ ಹರಿಯುತ್ತಿದ್ದ ನೀರು ಕಡಿಮೆಯಾಗಿದೆ. ಹದಿನಾರು ಸಾವಿರಕ್ಕೂ ಹೆಚ್ಚು ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿರುವ ಕಾರಣ ಭದ್ರಾ ಡ್ಯಾಂ (Bhadra Dam)  ಇಷ್ಟೊತ್ತಿಗೆ 160 ರ ಗಡಿ ದಾಟಿದೆ ಎಂದು ಭದ್ರಾ ಡ್ಯಾಂ ಅಥಾರಿಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಸೇರಿದಂತೆ ಭದ್ರಾ ಜಲಾನಯನ ಪ್ರದೇಶದಲ್ಲಿ ಮಳೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದು ಇಳಿಕೆಯಾಗಿದೆ. ಹೊರ ಹರಿವು 185 ಕ್ಯೂಸೆಕ್ ಇದೆ.

ಕಳೆದ ವರ್ಷ ಇಷ್ಟೊತ್ತಿಗೆ ಡ್ಯಾಂ ಬಹುತೇಕ ತುಂಬಿ ತುಳುಕುತಿತ್ತು. ಆದ್ರೆ, ಈ ವರ್ಷ ಇನ್ನೂ 26.4 ಅಡಿ ನೀರು ಹರಿದು ಬರಬೇಕು. ಕಳೆದ ಎರಡ್ಮೂರು ದಿನಗಳಿಂದ 16.5 ಅಡಿ ನೀರು ಡ್ಯಾಂಗೆ ಹರಿದು ಬಂದಿದೆ. ಮಳೆ ಉತ್ತಮವಾಗಿ ಸುರಿದರೆ ಮತ್ತಷ್ಟು ನೀರು ಅಣೆಕಟ್ಟಿಗೆ ಬರುತ್ತದೆ. ಸದ್ಯದ ಮಾಹಿತಿ ಪ್ರಕಾರ ಭದ್ರಾ ಜಲಾನಯನ ಪ್ರದೇಶದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಆದ್ರೆ, ಮಳೆ ಸುರಿಯುವ ಪ್ರಮಾಣ ತುಂಬಾನೇ ಕಡಿಮೆಯಾಗಿದೆ. ಕಳೆದ ವರ್ಷ ಇದೇ ದಿನ 184.1 ಅಡಿ ಇತ್ತು,

ಭದ್ರಾ ಡ್ಯಾಂ (Bhadra Dam)ನೀರಿನ ಮಟ್ಟ:

 

ಭದ್ರಾ ಡ್ಯಾಂ ನೀರಿನ ಒಟ್ಟು ಸಂಗ್ರಹ: 186 ಅಡಿ

ದಿನಾಂಕ: 28- 07 -2023

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ: 159.6

ಎಂಎಸ್ ಎಲ್ : 2131.75 ft

ಕೆಪಾಸಿಟಿ: 42455- 38271 tmc

ಒಳಹರಿವು: 16,041 ಕ್ಯೂಸೆಕ್

ಒಟ್ಟು ಹೊರಹರಿವು: 186 ಕ್ಯೂಸೆಕ್

ಕಳೆದ ವರ್ಷ ಇದೇ ದಿನ: 184.1 ಅಡಿ

ಕೆಪಾಸಿಟಿ: 69139 ಟಿಎಂಸಿ

 

Bhadra Dam, Bhadra Dam Water Level, Bhadra Dam Water Level Today

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಮಹಾಗಣಪತಿ

ಹಿಂದೂ ಮಹಾಗಣಪತಿ ಸಮಿತಿಯಿಂದ ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯಗೆ ಸನ್ಮಾನ

ಗಣೇಶ

“ಗಣೇಶ ಹಬ್ಬದ ಪೆಂಡಾಲ್ ಗಳು ಕ್ರಾಂತಿಕಾರಿಗಳ ಕಾರ್ಖಾನೆಗಳು, ಇಲ್ಲಿಂದಲೇ ಸ್ವಾತಂತ್ರ್ಯ ಕ್ರಾಂತಿ: ಹಾರಿಕಾ ಮಂಜುನಾಥ್ ಅಬ್ಬರದ ಭಾಷಣ!

ಮೆಡಿಕವರ್ ಆಸ್ಪತ್ರೆಯಿಂದ ವೈದ್ಯ ಹೆಲ್ತ್ ಕೇರ್ ಕ್ಲಿನಿಕ್‌ನಲ್ಲಿ ಮೂಲಭೂತ ಆರೋಗ್ಯ ತಪಾಸಣೆ ಶಿಬಿರ

ದಾವಣಗೆರೆ

BIG BREAKING: ದಾವಣಗೆರೆಯ ಮಟ್ಟಿಕಲ್ ಫ್ಲೆಕ್ಸ್ ವಿವಾದ: ಪಿಎಸ್ಐ ಸಚಿನ್ ಸೇರಿ ಮೂವರ ಸಸ್ಪೆಂಡ್!

M. P. Renukacharya

ನೂರಾರು ಕೇಸ್ ಹಾಕಿ ತಾಕತ್ತಿದ್ದರೆ ಬಂಧಿಸಿ: ಎಫ್ಐಆರ್ ಬಳಿಕ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಎಂ. ಪಿ. ರೇಣುಕಾಚಾರ್ಯ ಸವಾಲ್!

M. P. Renukacharya

BIG NEWS: “ಡಿಜೆ ಬಳಸಿ, ತಾಕತ್ತಿದ್ದರೆ ಜಿಲ್ಲಾಡಳಿತ ತಡೆಯಲಿ” ಎಂದಿದ್ದ ಎಂ. ಪಿ. ರೇಣುಕಾಚಾರ್ಯ ವಿರುದ್ಧ ಎಫ್ ಐಆರ್! ದೂರಿನ ಕಂಪ್ಲೀಟ್ ಡೀಟೈಲ್ಸ್

Leave a Comment