ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಭದ್ರಾ ಮೇಲ್ದಂಡೆ ಯೋಜನೆ; ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಭರ್ಜರಿ ಗುಡ್​ನ್ಯೂಸ್..!

On: January 10, 2025 8:42 PM
Follow Us:
---Advertisement---

ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ.

128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಬಳಕೆ ಮಾಡಬೇಕು. ಕಾಲುವೆಯ ಮೇಲೆ ಪ್ರತಿ 500 ಮೀಟರ್​ ಅಂತರದಲ್ಲಿ ಮೇಲು ರಸ್ತೆ ನಿರ್ಮಿಸಲು ಷರತ್ತು ವಿಧಿಸಿದೆ. ಇದರಿಂದ ಚಿಂಕಾರ ವನ್ಯಜೀವಿಗಳು ಸುಲಲಿತವಾಗಿ ಓಡಾಡಲು ಅನುಕೂಲ ಆಗಲಿದೆ. ಕೇಂದ್ರ ಸರ್ಕಾರದ ಈ ಷರತ್ತಿಗೆ ಕರ್ನಾಟಕ ಒಪ್ಪಿಗೆ ನೀಡಿದೆ.

ಭದ್ರಾ ಮೇಲ್ದಂಡೆ ಯೋಜನೆಯಿಂದ ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಯಿಂದ ತುಮಕೂರಿನ ಶಿರಾ, ಚಿಕ್ಕನಾಯಕನಹಳ್ಳಿ, ಪಾವಗಡ ತಾಲ್ಲೂಕಿಗೆ ನೀರು ಸರಬರಾಜು ಆಗಲಿದೆ. ರೈತರ ಬೆಳೆಗಳಿಗೆ ಹನಿ ನೀರಾವರಿ ಮೂಲಕ ನೀರು ಪೂರೈಕೆ ಆಗಲಿದೆ. ಕೆರೆಗಳಿಗೆ ನೀರು ತುಂಬಿಸಿ, ಕೆರೆಗಳಿಂದ ನೀರನ್ನು ಪಂಪ್ ಮಾಡಿ, ಹನಿ ನೀರಾವರಿಗೆ ಬಳಕೆ ಮಾಡಲಾಗುತ್ತದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ಜಮೀನುಗಳಿಗೆ ಹನಿ ನೀರಾವರಿ ವ್ಯವಸ್ಥೆ ಮಾಡಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ಶಾಶ್ವತ ಬರಪೀಡಿತ ಪ್ರದೇಶಗಳಿಗೆ ವರದಾನವಾಗಲಿದೆ. ಆ ಮೂಲಕ ಮಧ್ಯ ಕರ್ನಾಟಕದ ರೈತರ ದಶಕಗಳ ಹೋರಾಟ, ಕನಸು ನನಸಾಗುತ್ತಿದೆ.

Join WhatsApp

Join Now

Join Telegram

Join Now

Leave a Comment