SUDDIKSHANA KANNADA NEWS/DAVANAGERE/DATE:02_01_2026
ಶಿವಮೊಗ್ಗ:ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 3ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 8ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು.
ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.
ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ, ಆರ್.ಪ್ರಸನ್ನಕುಮಾರ್, ಅಭಿಯಂತರರಾದ ರವಿಕುಮಾರ್, ರವಿಚಂದ್ರ ಸೇರಿದಂತೆ ದಾವಣಗೆರೆ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳ ನೀರಾವರಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಭಾಗವಹಿಸಿದ್ದರು.
- Bhadra Dam
- Bhadra dam Davanagere
- Bhadra Dam News
- Bhadra Dam Suddi
- Bhadra dam Water
- DAVANAGERE
- DAVANAGERE NEWS
- DAVANAGERE NEWS UPDATES
- DAVANAGERE VARTHE
- ದಾವಣಗೆರೆ
- ದಾವಣಗೆರೆ ನಗರ
- ದಾವಣಗೆರೆ ನ್ಯೂಸ್
- ದಾವಣಗೆರೆ ವಾರ್ತೆ
- ದಾವಣಗೆರೆ ಸಿಟಿ
- ದಾವಣಗೆರೆ ಸುದ್ದಿ
- ಭದ್ರಾ ಡ್ಯಾಂ
- ಭದ್ರಾ ಡ್ಯಾಂ ಕಾಮಗಾರಿ
- ಭದ್ರಾ ಡ್ಯಾಂ ದಾವಣಗೆರೆ
- ಭದ್ರಾ ಡ್ಯಾಂ ನೀರಿನ ಮಟ್ಟ
- ಭದ್ರಾ ಡ್ಯಾಂ ನ್ಯೂಸ್
- ಭದ್ರಾ ಡ್ಯಾಂ ಸುದ್ದಿ






Leave a comment