ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ತುಂಗಭದ್ರಾ ನದಿಗೆ ಭದ್ರಾ ನೀರು, ಸಾರ್ವಜನಿಕರು ಎಚ್ಚರದಿಂದಿರಲು ಸೂಚನೆ

On: February 6, 2024 7:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE: 06-02-2024

ದಾವಣಗೆರೆ: ಬಹುಗ್ರಾಮ ಕುಡಿಯುವ ನೀರು ಯೋಜನೆ, ಜಾತ್ರಾ ಮಹೋತ್ಸವದ ಉದ್ದೇಶದಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದ್ದು ಸಾರ್ವಜನಿಕರು ನದಿ ದಂಡೆಗೆ ಬಾರದಂತೆ, ದಾಟದಂತೆ ಎಚ್ಚರಿಕೆ ವಹಿಸಬೇಕೆಂದು ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನದಿಗೆ ಫೆಬ್ರವರಿ 5 ರಿಂದ 10 ರ ವರೆಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ಸ್ ಮತ್ತು ಫೆ.18 ರಿಂದ 23 ರ ವರೆಗೆ ಪ್ರತಿದಿನ 500 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತದೆ. ಹಾವೇರಿ, ಗದಗ, ಮತ್ತು ಬೆಟಗೇರಿ, ರಾಣಿಬೆನ್ನೂರು, ಬ್ಯಾಡಗಿ,
ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ
ವಾರ್ಷಿಕ ಕಾರ್ಣಿಕೋತ್ಸವದ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರಿಗಾಗಿ ಹರಿಸಲಾಗುವುದು.

ಆದರೆ ಅನಧಿಕೃತ ಪಂಪ್‍ಸೆಟ್‍ಗಳ ಮೂಲಕ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment