SUDDIKSHANA KANNADA NEWS/ DAVANAGERE/ DATE:15-10-2024
ಬೆಂಗಳೂರು: ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ, ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.
ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು;
ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.