ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ಕುರಿತು ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿತ್ತು. ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಈ ಭಾರತ್ ಬಂದ್ಗೆ ಕರೆ ನೀಡಿದೆ.
ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅನೇಕ ಸಂಘಟನೆಗಳು ಬೆಂಬಲ
ಸೂಚಿಸಿವೆ. ಉತ್ತರ ರಾಜ್ಯಗಳಲ್ಲಿ ಈ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ತೀವ್ರ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.