SUDDIKSHANA KANNADA NEWS/ DAVANAGERE/ DATE: 07-09-2023
ದಾವಣಗೆರೆ: ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ (Bharat Jodo Yatra)ಯೂ ಒಂದು ವರ್ಷ ಪೂರೈಸಿದೆ.
ಈ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪರ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು,
ಈ ಸುದ್ದಿಯನ್ನೂ ಓದಿ:
ಸುದ್ದಿಕ್ಷಣ ಮೀಡಿಯಾದಲ್ಲಿ ಮಾತ್ರ: ಷೇರು ಮಾರುಕಟ್ಟೆ(Stock market)ಯಲ್ಲಿ ಗೂಳಿಯ ಓಟ ಜೋರು, ನಿಫ್ಟಿ 116 ಅಂಕ – ಸೆನ್ಸೆಕ್ಸ್ 385.04 ಅಂಕ ಏರಿಕೆ
ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಈ ಪಾದಯಾತ್ರೆ ಉದ್ಘಾಟನೆ ನೆರವೇರಿಸಿದರು. ಬಳಿಕ ಪಕ್ಷದ ಕಾರ್ಯಕರ್ತರಿಗೆ ಭಾರತ್ ಜೋಡೋ ಯಾತ್ರೆಯ ಮೊದಲ ವರ್ಷದ ವಾರ್ಷಿಕೋತ್ಸವದ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ಜಗಳೂರು ಶಾಸಕ ಬಿ ದೇವೇಂದ್ರಪ್ಪ, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್, ರೇವಣಸಿದ್ದಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಎಸ್. ಮಲ್ಲಿಕಾರ್ಜುನ್, ಮಹಾನಗರ ಪಾಲಿಕೆಯ ಮೇಯರ್ ವಿನಾಯಕ್ ಪೈಲ್ವಾನ್, ಪಾಲಿಕೆ ಸದಸ್ಯರಾದ ಗಡಿ ಗುಡಾಳ್ ಮಂಜುನಾಥ್, ಚಮನ್ ಸಾಬ್, ಎ. ನಾಗರಾಜ್, ನಂಜಾ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ಅಬಿದ್ ಅಲಿ, ಮೊಹಮ್ಮದ್ ಜಬಿವುಲ್ಲಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಯಿ ಮಾಲತೇಶ್, ಸುಷ್ಮಾ ಪಾಟೀಲ್ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.