SUDDIKSHANA KANNADA NEWS/ DAVANAGERE/ DATE:05-01-2025
ಗುಜರಾತ್: ಗುಜರಾತ್ನ ಪೋರಬಂದರ್ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನವಾಗಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಗುಜರಾತ್ನ ಪೋರಬಂದರ್ನಲ್ಲಿ ಕೋಸ್ಟ್ ಗಾರ್ಡ್ನ ಸುಧಾರಿತ ಲಘು ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಭೀಕರ ಅಪಘಾತದಲ್ಲಿ ವಿಮಾನ ಧಗಧಗಿಸಿದ್ದು, ಹೊತ್ತಿ ಉರಿಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.