SUDDIKSHANA KANNADA NEWS/DAVANAGERE/DATE:14_12_2025
ಬೆಂಗಳೂರು: ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು. ಈ ಬಗ್ಗೆ ವಿಷಾಧಿಸುತ್ತೇನೆ ಎಂದು ಸಂತಾಪ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಶಾಮನೂರು ಶಿವ ಶಂಕರಪ್ಪ ಅವರು ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು ಎಂದು ತಿಳಿಸಿದ್ದಾರೆ.
ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವೈಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪದಲ್ಲಿ ತಿಳಿಸಿದ್ದಾರೆ.





Leave a comment