SUDDIKSHANA KANNADA NEWS/ DAVANAGERE/ DATE:07-02-2025
ಬೆಂಗಳೂರು: ಮುಡಾ ಅಕ್ರಮ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮುಡಾದಲ್ಲಿ ಸೈಟ್ ಪಡೆದಿರುವ ಸಿದ್ದರಾಮಯ್ಯರ ಪತ್ನಿ ಪಾರ್ವತಿ, ಬೈರತಿ ಸುರೇಶ್ ವಿರುದ್ಧ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರ ಇದ್ದು, ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಸಿಬಿಐಗೆ ವಹಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು.
ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಲೋಕಾಯುಕ್ತ ಸ್ವತಂತ್ರ ಸಂಸ್ಥೆ. ಹಾಗಾಗಿ, ವರದಿ ಸಲ್ಲಿಸಿದೆ. ಈ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು. ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕೃತ ಎಂದು ಹೈಕೋರ್ಟ್ ಹೇಳಿದೆ.
ಸ್ನೇಹಮಯಿ ಕೃಷ್ಣರ ಪರ ವಕೀಲ ಲಕ್ಷ್ಮಣ್ ಅವರು ಕೋರ್ಟ್ ಆದೇಶದ ಪ್ರತಿ ಸಿಕ್ಕ ಬಳಿಕ ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ. ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವುದು ಪಕ್ಕಾ ಎಂದು ತಿಳಿಸಿದ್ದಾರೆ.