SUDDIKSHANA KANNADA NEWS/ DAVANAGERE/ DATE:07-03-2025
ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯವು ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಪಾರ್ವತಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಇಡಿ ಸಮನ್ಸ್ ರದ್ದುಗೊಳಿಸಿದ್ದು, ಈ ಮೂಲಕ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಈ ಆದೇಶ ನೀಡಿದೆ. ಈ ಪ್ರಕರಣದಲ್ಲಿ ಯಾವುದೇ ಹಣದ ವಹಿವಾಟು ನಡೆದಿಲ್ಲ. ಹಾಗಾಗಿ, ಪಾರ್ವತಿ ಹಾಗೂ ಬೈರತಿ ಸುರೇಶ್ ವಿರುದ್ಧ ಯಾವುದೇ ಪುರಾವೆ ಇಲ್ಲ. ಈ ಕಾರಣದಿಂದ
ಇಡಿ ನೀಡಿರುವ ಸಮನ್ಸ್ ನಲ್ಲಿ ಹುರುಳಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.