Site icon Kannada News-suddikshana

ನಕ್ಸಲರ ಶರಣಾಗತಿಯಲ್ಲಿ ಬಿಗ್ ಟ್ವಿಸ್ಟ್: ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ಚಿಕ್ಕಮಗಳೂರು: ಜಿಲ್ಲಾಡಳಿತ ಮುಂದೆ ಶರಣಾಗಬೇಕಿದ್ದ ಆರು ಜನ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾಗಲಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಬೆಂಗಳೂರಿನಲ್ಲಿ ಶರಣಾಗಲಿದ್ದಾರೆ.

ಆರು ಜನ ನಕ್ಸಲರ ಪೋಷಕರು ಚಿಕ್ಕಮಗಳೂರು ಜಿಲ್ಲಾಡಳಿದ ಮುಂದೆ ತಮ್ಮವರನ್ನು ನೋಡಲು ಕಾತರದಿಂದ ಕಾದಿದ್ದರು. ಆದರೆ, ಇದು ದಿಢೀರ್ ಬದಲಾವಣೆಗೊಂಡಿದ್ದು, ಇದೀಗ ಪೋಷಕರನ್ನು ಬೆಂಗಳೂರಿಗೆ ಕಳಿಸಲು ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಇಂದು (ಜ.8) ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಸಿ.ಎಂ.ಸಮ್ಮುಖದಲ್ಲಿ ಶರಣಾಗಲಿದ್ದಾರೆ.

Exit mobile version