ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಹಕ್ಕಿಜ್ವರದ ಬಗ್ಗೆ ಭಯ ಬೇಡ, ಆದ್ರೆ, ಏನೆಲ್ಲಾ ಎಚ್ಚರಿಕೆ ಕ್ರಮ ವಹಿಸಬೇಕು..?

On: February 28, 2025 6:26 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:28-02-2025

ದಾವಣಗೆರೆ: ರಾಜ್ಯದ ಕೆಲವು ಸ್ಥಳಗಳಲ್ಲಿ ವರದಿಯಾಗಿರುವ ಹಕ್ಕಿ ಜ್ವರ (ಬರ್ಡ್ ಫ್ಲೂ) ಪ್ರಕರಣದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಮುಂಜಾಗ್ರತೆ ವಹಿಸಲಾಗಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಸೂಚನೆ ನೀಡಲಾಗಿದೆ.

ಹಕ್ಕಿ ಜ್ವರವು (ಹಕ್ಕಿಗಳಿಗೆ ಸಂಬಂಧಿಸಿದ) ವೈರಾಣುಗಳಿಂದ (ವೈರಸ್) ಉಂಟಾಗಿದ್ದು, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಸೋಂಕು ತಗುಲಿದ
ಕೋಳಿ ಮರಿಗಳ ಪುಕ್ಕಗಳನ್ನು ತರಿಯುವ ಮತ್ತು ವಧೆಗೈಯುವ ಕಾರ್ಯಗಳಲ್ಲಿ ನಿರತರಾದ ವಯಸ್ಕರಲ್ಲಿ ಹೆಚ್ಚಾಗಿ ಈ ಸೋಂಕು ಸಂಭವಿಸುತ್ತದೆ.

ಸೋಂಕು ತಗಲಿದ ಅಥವಾ ಸಾಯುವ ಹಂತದಲ್ಲಿರುವ ಕೋಳಿಗಳಿರುವ ವಾತಾವರಣದಲ್ಲಿ ಕ್ರೀಡಾನಿರತರಾದ ಮಕ್ಕಳಿಗೂ ಈ ಸೋಂಕು ಹರಡುತ್ತದೆ. ಈ ಹಿನ್ನಲೆಯಲ್ಲಿ ಜನತೆಗೆ ಜಾಗೃತಿ ನೀಡುವ ಮೂಲಕ ಸೋಂಕು ಹರಡದಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮಗಳು:

– ಹಕ್ಕಿಗಳ ಅಸಹಜ ಸಾವು ಕಂಡಬಂದಲ್ಲಿ ತಕ್ಷಣ ಪಶು ಇಲಾಖೆಗೆ ತಿಳಿಸಬೇಕು. ವ್ಯಾದಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು.
– ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು, ಕೊಲ್ಲಬಾರದು ಅಥವಾ ಕೈಯಿಂದ ಮುಟ್ಟಬಾರದು.
– ಮನೆಯಲ್ಲಿ ಸೋಂಕು ತಗುಲಿದ ಹಕ್ಕಿಗಳ ಪುಕ್ಕಗಳನ್ನು ತೆಗೆಯಬಾರದು ಅಥವಾ ಕೈಯಿಂದ ಮುಟ್ಬಬಾರದು.
– ಹಕ್ಕಿಗಳು ವೈರಾಣು ಸೋಂಕನ್ನು ಹೊಂದಿರಬಹುದಾಗಿರುವುದರಿಂದ ಮಕ್ಕಳನ್ನು ಅಂತಹ ಹಕ್ಕಿಗಳನ್ನು ಸ್ಪರ್ಶಮಾಡುವುದಕ್ಕಾಗಲಿ ಅಥವಾ ಅವುಗಳೊಂದಿಗೆ ಆಟ ಆಡುವುದಕ್ಕಾಲಿ ಅಥವಾ ಸಾಗಿಸುವುದಕ್ಕಾಗಲಿ
ಬಿಡಬಾರದು.
– ಹಕ್ಕಿ ಜ್ವರ ತಲೆದೂರಿರುವ ಪ್ರದೇಶದಲ್ಲಿ ನೀವು ವಾಸಿಸುತ್ತಿರುವುವರಾದರೆ ಎಲ್ಲಿ ಜೀವಂತ ಹಕ್ಕಿಗಳನ್ನು ಮಾರುತ್ತಾರೋ ಅಥವಾ ಮಾಂಸಕ್ಕಾಗಿ ವಧಿಸುತ್ತಾರೋ ಅಂತಹ ಸ್ಥಳಗಳಿಗೆ ನೀವು ಹೋಗಬೇಡಿ ಕೋಳಿಗಳ ಯಾವುದೇ ವಿಸರ್ಜನೆಗಳನ್ನು ಗೊಬ್ಬರವನ್ನಾಗಿ ಉಪಯೋಗಿಸಬಾರದು.

ಮುಂಜಾಗೃತಾ ಕ್ರಮ ಮಾಡಬೇಕಾಗಿರುವುದು:

– ಹಕ್ಕಿಗಳನ್ನು ಕೈಯಿಂದ ಮುಟ್ಟಿದ ನಂತರ ಕೈಗಳನ್ನು ಸಾಬೂನಿಂದ ಮತ್ತು ನೀರಿನಿಂದ ತೊಳೆದುಕೋಳ್ಳಬೇಕು.
– ಕೋಳಿ ಮರಿಗಳನ್ನು ಕೈಗಳಿಂದ ಮುಟ್ಟುವಾಗ ಮೂಗು ಮತ್ತು ಬಾಯಿಗೆ ದಪ್ಪ ಬಟ್ಟೆಯ ಮುಸುಕು ಹಾಕಿಕೊಳ್ಳಿ.
– ಹಕ್ಕಿಗಳನ್ನು ಮುಟ್ಟಿದ ನಂತರ ಕೈಗಳಿಂದ ಕಣ್ಣು, ಮೂಗು ಅಥವಾ ಬಾಯಿಯನ್ನು ಉಜ್ಜಿಕೊಳ್ಳದಂತೆ ಎಚ್ಚರವಹಿಸಿ.
– ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ತಿನ್ನಲು ಚೆನ್ನಾಗಿ ಬೇಯಿಸಿ ಸೇವಿಸಬೇಕು.

ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫೌಲ್ಟ್ರಿಗಳಲ್ಲಿ ನಿಗಾವಹಿಸುವಂತೆ ಸೂಚಿಸಲಾಗಿದೆ.

ಕೋಳಿ ಸಾಕಾಣಿಕೆ ಫೌಲ್ಟ್ರಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಕಾಳಜಿವಹಿಸುವ ಕುರಿತು ಜಾಗೃತಿ ನೀಡಲು ಅಗತ್ಯವೆನಿಸಿದಲ್ಲಿ ಚಿಕಿತ್ಸೆಗೆ ಯಾವುದೆ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕಾಗಿ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆಯುವಂತೆ ತಿಳಿಸಲಾಗಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment