SUDDIKSHANA KANNADA NEWS/ DAVANAGERE/ DATE:05-03-2025
ಬೆಂಗಳೂರು: ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಅವರು, ಮನುಷ್ಯರಿಗೆ ಹಕ್ಕಿಜ್ವರ ಹರಡುವುದು ತುಂಬಾನೇ ಕಡಿಮೆ. ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದ್ದಾರೆ.
ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.