Site icon Kannada News-suddikshana

Bitcoin: ಬಿಟ್ ಕಾಯಿನ್ ಹಗರಣದ ಎಸ್ಐಟಿ ತನಿಖಾ ವರದಿ ಶೀಘ್ರದಲ್ಲೇ ಸಲ್ಲಿಕೆ: ಪ್ರಕರಣ ರದ್ದು ಮಾಡಿ ಎಂಬ ಬೇಡಿಕೆಗೆ ಹೈಕೋರ್ಟ್ ಹೇಳಿದ್ದೇನು…?

SUDDIKSHANA KANNADA NEWS/ DAVANAGERE/ DATE:12-08-2023

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ (Bitcoin) ಹಗರಣ ಸಂಬಂಧ ತನಿಖೆ ಮುಂದುವರಿದಿದೆ. ಸದ್ಯದಲ್ಲಿಯೇ ನ್ಯಾಯಾಲಯಕ್ಕೆ ವಿಶೇಷ ತನಿಖಾ ದಳವು ದಾಖಲೆ ಸಲ್ಲಿಕೆ ಮಾಡಲಿದೆ.

ಈ ಸಂಬಂಧ ಹೈಕೋರ್ಟ್ ಗೆ ರಾಜ್ಯ ಸರ್ಕಾರವು ಮಾಹಿತಿ ನೀಡಿದೆ. ಬಿಟ್ ಕಾಯಿನ್ (Bitcoin) ಹಗರಣ ರೂವಾರಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸೇರಿದಂತೆ ಇತರರು ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ಕಾನೂನು ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿ ಆರೋಪಿಗಳಾದ ಶ್ರೀಕೃಷ್ಣ ರಮೇಶ್‌ ಅಲಿಯಾಸ್‌ ಶ್ರೀಕಿ, ಸಹ ಆರೋಪಿಗಳಾದ ಸುನೀಶ್‌ ಹೆಗ್ಡೆ, ಪ್ರಸಿದ್ಧ ಶೆಟ್ಟಿ ಹಾಗೂ ಹೇಮಂತ್‌ ಮುದ್ದಪ್ಪ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ್‌ ಚಂದನ್‌ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಾದ ಸಿ.ಎಚ್‌.ಹನುಮಂತರಾಯ ಮತ್ತು ಸಂದೇಶ್‌ ಚೌಟ ಅವರು, ಅರ್ಜಿದಾರರ ವಿರುದ್ಧ ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಸಿಸಿಬಿಯಲ್ಲಿ ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿರುವುದು ಕಾನೂನಿಗೆ ವಿರುದ್ಧವಾಗಿವೆ ಎಂದು ಆರೋಪಿಗಳ ಪರ ವಕೀಲರು ವಾದಿಸಿದರು.

ಈ ಸುದ್ದಿಯನ್ನೂ ಓದಿ: 

Amit Shah: ನೂತನ ಕಾನೂನಿನಲ್ಲಿ ಲವ್ ಜಿಹಾದಿಗೆ ಬ್ರೇಕ್, ನಕಲಿ ಆಧಾರ ತೋರಿಸಿ ಮದುವೆಯಾದರೆ ಜೈಲು ಶಿಕ್ಷೆ, ದಂಡ ಖಚಿತ: ಅಮಿತ್ ಶಾ

ಈ ಮಧ್ಯೆ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು, ಈಗಾಗಲೇ ಬಿಟ್‌ ಕಾಯಿನ್‌ ಹಗರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಲಾಗಿದೆ. ಮುಂದಿನ ವಿಚಾರಣೆ ವೇಳೆಗೆ ತನಿಖೆಯ ವರದಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.
ಹೀಗಾಗಿ, ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು. ನ್ಯಾಯಪೀಠವು ಮಾನ್ಯ ಮಾಡಿ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿತು.

Exit mobile version