ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಬಿಜೆಪಿ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಆರೋಪ ಮಾಡಿದ್ದಾರೆ.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರು ಬದಲಾವಣೆ ಮಾಡಿರುವುದಕ್ಕೆ ಕೇಂದ್ರ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಿಯಾಂಕ್ ಖರ್ಗೆ ಈ ಹಿಂದೆ ವಾಗ್ದಾಳಿ ನಡೆಸಿದಂತೆ ಮತ್ತೆ ಮುಂದುವರಿಸಿದ್ದಾರೆ.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೋಡ್ಸೆಯನ್ನು ಮತ್ತೆ ಜೀವಂತಗೊಳಿಸಿವೆ. ಈ ಬಾರಿ, ವಿಬಿ ಜಿ ರಾಮ್ ಜಿ ಮಸೂದೆಯ ಮೂಲಕ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಕೊಲ್ಲುವುದು ಅವರ ಗುರಿ ಎಂದು ಕಿಡಿಕಾರಿದ್ದಾರೆ.
ನಾವು ಮಸೂದೆಯನ್ನು ವಿರೋಧಿಸಲು ಮಾತ್ರವಲ್ಲ, ಗಾಂಧೀಜಿಯವರ ಕಲ್ಪನೆಯ ಭಾರತದ ಆತ್ಮವನ್ನು ರಕ್ಷಿಸಲು ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ಮನರೇಗಾ ಯೋಜನೆಯನ್ನು ಮರುಸ್ಥಾಪಿಸಿ, ವಿಬಿ-ಗ್ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸುವವರೆಗೂ ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ. ಇದು ನರೇಗಾವನ್ನು ಆಶ್ರಯಿಸಿರುವ ಕೂಲಿ ಕಾರ್ಮಿಕರಿಗೆ ಮಾತ್ರವಲ್ಲ, ಇಡೀ ಗ್ರಾಮದ ಸಮಗ್ರ ಅಭಿವೃದ್ಧಿಗೆ, ಆರ್ಥಿಕ ಪ್ರಗತಿಗೆ ಮತ್ತು ಗ್ರಾಮ ಪಂಚಾಯತಿಗಳ ಅಧಿಕಾರಕ್ಕೆ ಮಾರಕವಾಗಲಿದೆ. ಗ್ರಾಮೀಣ ಜನರಿಗೆ ಹಾಗೂ ರಾಜ್ಯ ಸರ್ಕಾರದ ಮೇಲೆ ಆರ್ಥಿಕ ಸಂಕಷ್ಟದ ಹೊರೆ ಹೆಚ್ಚಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.





Leave a comment