SUDDIKSHANA KANNADA NEWS/ DAVANAGERE/ DATE:21-03-2025
ಬೆಂಗಳೂರು: ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಹಾಗಿಲ್ಲ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರೂ ಕಾಂಗ್ರೆಸ್ ಸರ್ಕಾರ ತುಷ್ಟೀಕರಣಕ್ಕಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
40ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲಾಗಿದೆ. ಇಷ್ಟೆಲ್ಲಾ ಅನಾಚಾರಗಳನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದ್ದರೂ ಬಿಜೆಪಿ ಸುಮ್ಮನೆ ಕಣ್ಣುಮುಚ್ಚಿ ಕೂರುವುದಿಲ್ಲ ಎಂದು ಎಚ್ಚರಿಕೆ
ನೀಡಿದೆ.
ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದ 18 ಶಾಸಕರನ್ನು 6 ತಿಂಗಳು ಅಮಾನತ್ತು ಮಾಡುವ ಮೂಲಕ ಕಾಂಗ್ರೆಸ್ ಟಿಪ್ಪು ಸರ್ವಾಧಿಕಾರವನ್ನು ಕರ್ನಾಟಕದಲ್ಲಿ ಜಾರಿಗೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಅವರು ಕೂಡಲೇ ಈ ಆದೇಶವನ್ನು ವಾಪಸ್ ಪಡೆಯದೆ ಹೋದರೆ, ನಿರಂತರ ಹೋರಾಟ ಎದುರಿಸಲು ಸರ್ಕಾರ ಸಿದ್ಧವಾಗಲಿ ಎಂದು ತಿಳಿಸಿದೆ.