ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಜೆಪಿ ದಾವಣಗೆರೆ ಉತ್ತರ, ದಕ್ಷಿಣ ಅಭ್ಯರ್ಥಿಗಳ ಪ್ರಚಾರ ಜೋರು: ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕದನಕಲಿಗಳು

On: April 19, 2023 11:59 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:19-04-2023

ದಾವಣಗೆರೆ (DAVANAGERE): ದಾವಣಗೆರೆ ಉತ್ತರ ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರ ರಂಗೇರುತ್ತಿದೆ. ಒಂದೆಡೆ ಕಾಂಗ್ರೆಸ್ (CONGRESS) ಅಭ್ಯರ್ಥಿಗಳಾದ ಅಪ್ಪ ಮಗ ಡಾ. ಶಾಮನೂರು ಶಿವಶಂಕರಪ್ಪ ಹಾಗೂ ಎಸ್. ಎಸ್. ಮಲ್ಲಿಕಾರ್ಜುನ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ. ಜಿ. ಅಜಯಕುಮಾರ್ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಮನೆ ಮನೆ ಭೇಟಿ ನೀಡುತ್ತಿರುವ ಬಿಜೆಪಿ ಅಭ್ಯರ್ಥಿಗಳು ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ.

ಗ್ರಾಮೀಣ ಭಾಗದಲ್ಲಿ ಉತ್ತಮ ಸಂಪರ್ಕ ಹೊಂದಿರುವ ಲೋಕಿಕೆರೆ ನಾಗರಾಜ್ ಅವರು ರೈತ ನಾಯಕರಾಗಿ ಗುರುತಿಸಿಕೊಂಡಿರುವವರು. ಬಿಜೆಪಿಯಿಂದ ಕಣಕ್ಕಿಳಿದಿರುವ ಲೋಕಿಕೆರೆ ನಾಗರಾಜ್ ಮತ್ತು ಅವರ ಪತ್ನಿಯೂ ಪ್ರಚಾರ ಚುರುಕುಗೊಳಿಸಿದ್ದಾರೆ.

 

ನಿಟುವಳ್ಳಿ, ಭಗತ್ ಸಿಂಗ್ ನಗರ ಸೇರಿದಂತೆ ಹಲವೆಡೆ ಪ್ರಚಾರ ಸಭೆ ನಡೆಸಿದ್ದಾರೆ. ಜೊತೆಗೆ ಅಜಯ್ ಕುಮಾರ್ ಅವರೂ ಸಹ ಚುನಾವಣಾ ಪಕ್ಷದ ಕಚೇರಿ ಆರಂಭಿಸಿದ್ದಾರೆ. ಸಂಸದ ಜಿ. ಎಂ. ಸಿದ್ದೇಶ್ವರ ಕಚೇರಿ ಉದ್ಘಾಟನೆ ನೆರವೇರಿಸಿದರು. ಶಾಸಕ ಎಸ್. ಎ. ರವೀಂದ್ರನಾಥ್, ದೂಡಾ ಮಾಜಿ ಅಧ್ಯಕ್ಷರಾದ ಯಶವಂತರಾವ್ ಜಾಧವ್, ದೇವರಮನಿ ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18 ನೇ ವಾರ್ಡ್ ಕಾಯಿಪೇಟೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮನೆ ಮನೆ ಸಂಪರ್ಕ – ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಹಾನಗರ ಪಾಲಿಕೆಯ ಮಾಜಿ ಮೇಯರ್ ಎಸ್. ಟಿ. ವೀರೇಶ್, ಬಿಜೆಪಿ ಯುವ ಮುಖಂಡ ಶಿವನಗೌಡ ಪಾಟೀಲ್, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅಜಯ್ ಕುಮಾರ್, ಕಾರ್ಯಕರ್ತರ ಶಕ್ತಿ ಹೊಂದಿರುವ ಪಕ್ಷ ಬಿಜೆಪಿ. ಸುಲಭವಾಗಿ ಜನರ ಕೈಗೆ ಸಿಗುವ ಅಭ್ಯರ್ಥಿಗಳನ್ನು ಜನರು ಗೆಲ್ಲಿಸುತ್ತಾರೆ. ಮುಖಂಡರು, ಕಾರ್ಯಕರ್ತರು ಗೆಲ್ಲಿಸುವ ಭರವಸೆ ಇದೆ. ದಾವಣಗೆರೆ ದಕ್ಷಿಣದಲ್ಲಿ ಹೊಸ ಮುಖಕ್ಕೆ ಆದ್ಯತೆ ನೀಡಬೇಕೆಂದು ಜನರು ತೀರ್ಮಾನಿಸಿದ್ದಾರೆ. ಇಷ್ಟು ವರ್ಷ ನಾವು ತಪ್ಪು ಮಾಡಿದ್ದೇವೆ. ಮನೆ ಮನೆಗೆ ಬರುವ ಅಭ್ಯರ್ಥಿಯನ್ನು ಗೆಲ್ಲಿಸಿ ಕಳುಹಿಸಲು ನಿರ್ಧರಿಸಿದ್ದಾರೆ. ಅಲ್ಪಸಂಖ್ಯಾತರು ಶೇಕಡಾ 70ರಷ್ಟು ಬಿಜೆಪಿ ಬೆಂಬಲಿಸುವ ವಿಶ್ವಾಸವಿದೆ ಎಂದರು.

ಬಿಜೆಪಿ (BJP) ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಅಜಯ್ ಕುಮಾರ್ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಬಿಜೆಪಿಗೆ ಜನರ ಪ್ರೀತಿ, ವಿಶ್ವಾಸ ಸಿಗುತ್ತಿರುವುದನ್ನು ನೋಡಿ ಎದುರಾಳಿ ಪಕ್ಷದವರಿಗೆ ನಡುಕ ಉಂಟಾಗಿದೆ. ಈ ಬಾರಿ ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಬೆಳಿಗ್ಗೆ ದಾವಣಗೆರೆ (DAVANAGERE) ಉತ್ತರ ವಿಧಾನಸಭಾ ಕ್ಷೇತ್ರದ ‌ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಅವರ ಪರವಾಗಿ ಬಿಜೆಪಿ ಉತ್ತರ ಯುವ ಮೋರ್ಚಾ ವತಿಯಿಂದ ಟಿ ವಿ ಸ್ಟೇಷನ್ ಕೆರೆ, ರಾಮ್ ಅಂಡ್ ಕೋ ಸರ್ಕಲ್, ಪಿ ಜೆ ಬಡಾವಣೆಯಲ್ಲಿ ಪ್ರಚಾರ ನಡೆಸಲಾಯಿತು.

ಲೋಕಿಕೆರೆ ನಾಗರಾಜ್ ಪರ ಮತ ಪ್ರಚಾರ ಜೋರಾಗಿದೆ. ಜಿಲ್ಲಾ ಯುವ ಮೋರ್ಚಾ ಬಿಜೆಪಿ ಪದಾಧಿಕಾರಿಗಳು ಹಾಗೂ ದಾವಣಗೆರೆ ಉತ್ತರ ಮಂಡಲ ಯುವ ಮೋರ್ಚಾ ಬಿಜೆಪಿ ಪದಾಧಿಕಾರಿಗಳು ಮತಯಾಚನೆ ಮಾಡಿದರು.
ಕುಂದುವಾಡ ಕೆರೆ, ನಗರದ ಪ್ರಮುಖ ಪಾರ್ಕ್ ಗಳು, ಇಂಡೋ ಸ್ಟೇಡಿಯಂ, ಜನಸಂದರಣಿ ಇರುವ ಸ್ಥಳಗಳಲ್ಲಿ ಪ್ರಚಾರ ಕೈಗೊಳ್ಳಲಾಯಿತು.

ಬಿಜೆಪಿ ಪಕ್ಷವು ಒಬ್ಬ ರೈತನಾಯಕನನ್ನು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಅವಕಾಶ ನೀಡಿದೆ. ಜನಸಾಮಾನ್ಯರಾದ ನಾವು ಅಭ್ಯರ್ಥಿಯನ್ನು ಗುರುತಿಸಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಳನ್ನು ನೀಡುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಗೆಲ್ಲಿಸುವಂತೆ ಮತದಾರರಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮನವಿ ಮಾಡಿದರು.

 

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment