ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಬಿಜೆಪಿಯವರು ರಾಜಕೀಯವಾಗಿ ರಾಜೀನಾಮೆ ಕೇಳ್ತಾರೆ: ಸಿಎಂ ಸಿದ್ದರಾಮಯ್ಯ

On: June 11, 2025 1:08 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE-11-06-2025

ಚಿಕ್ಕಬಳ್ಳಾಪುರ (ಗೌರಿಬಿದನೂರು): ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment