ಬೆಂಗಳೂರು: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಿವಂಗತ ತಂದೆಯವರ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಯಿತು.
ಚುನಾವಣೆಯಲ್ಲಿ ರಾಜಕೀಯವಾಗಿ ಎದುರಿಸಲು ಅಶಕ್ತರಾಗಿರುವ ಕಾಂಗ್ರೆಸ್ ನಾಯಕರು, ಈಗ ಪ್ರಧಾನಿಯವರ ಅಗಲಿದ ತಂದೆಯವರನ್ನು ನಿಂದಿಸುವ ಕೀಳು ಮಟ್ಟಕ್ಕೆ ಇಳಿದಿರುವುದು ಅವರ ಹತಾಶೆ ಹಾಗೂ ರಾಜಕೀಯ ದಿವಾಳಿತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ರಾಜಕೀಯ ಪ್ರತಿಸ್ಪರ್ಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸುವ ಬದಲು ವೈಯಕ್ತಿಕ ನಿಂದನೆಗೆ ಇಳಿದಿರುವ ಕಾಂಗ್ರೆಸ್ ಸಾರ್ವಜನಿಕ ಜೀವನದ ಸೌಜನ್ಯದ ಎಲ್ಲೆಗಳನ್ನು ಮೀರುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ವಯಸ್ಸಿನ ಹಿರಿಮೆ ಹಾಗೂ ಹುದ್ದೆಯ ಗೌರವವನ್ನು ಮರೆತು ಖಾಸಗಿ ವ್ಯಕ್ತಿಗಳನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುವುದು ಶೋಭೆ ತರುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಈ ಹೇಳಿಕೆಗೆ ತಕ್ಷಣವೇ ದೇಶದ ಜನತೆಯ ಮುಂದೆ ಬೇಷರತ್ ಕ್ಷಮೆಯಾಚಿಸಬೇಕು, ಇಲ್ಲದಿದ್ದರೆ ಪ್ರಜಾಪ್ರಭುತ್ವದ ಹಾದಿಯಲ್ಲೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ:
ಪ್ರಧಾನಿ ಮೋದಿ ತಂದೆಯವರ ಕುರಿತ ಹೇಳಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಹಾಗೂ ಸಾವಿರಾರು ಕಾರ್ಯಕರ್ತರಿಂದ ಬೃಹತ್ ಆಂದೋಲನ.
ಕಾಂಗ್ರೆಸ್ ಹತಾಶೆಗೆ ಆಕ್ಷೇಪ:
ಸರಣಿ ಚುನಾವಣಾ ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ವೈಯಕ್ತಿಕ ನಿಂದನೆ ಹಾಗೂ ಅಸಂಸ್ಕೃತ ರಾಜಕಾರಣದ ಮೊರೆ ಹೋಗುತ್ತಿದ್ದಾರೆ ಎಂದು ತೀವ್ರ ಖಂಡನೆ.
ಬೇಷರತ್ ಕ್ಷಮೆಯಾಚನೆಗೆ ಒತ್ತಾಯ:
ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಪಕ್ಷದ ಮುಖಂಡರಿಂದ ಅಗ್ರಹ.
ಈ ಬೃಹತ್ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಚಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಎನ್. ರವಿಕುಮಾರ್, ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಕೇಶವ ಪ್ರಸಾದ್, ಸಿ.ಕೆ. ರಾಮಮೂರ್ತಿ ಸೇರಿದಂತೆ ಹಲವು ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಸರ್ಕಾರದ ಹಾಗೂ ಕಾಂಗ್ರೆಸ್ ಧೋರಣೆಯ ವಿರುದ್ಧ ಆಕ್ರೋಶ ಹೊರಹಾಕಿದರು.





Leave a comment