Home ದಾವಣಗೆರೆ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಿತಿನ್ ನಬಿನ್ ತಂಡದಲ್ಲಿ ಸ್ಮೃತಿ ಇರಾನಿ, ರಾಮ್ ಮಾಧವ್‌ಗೆ ಪ್ರಮುಖ ಹೊಣೆ!
ದಾವಣಗೆರೆನವದೆಹಲಿಬೆಂಗಳೂರು

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ನಿತಿನ್ ನಬಿನ್ ತಂಡದಲ್ಲಿ ಸ್ಮೃತಿ ಇರಾನಿ, ರಾಮ್ ಮಾಧವ್‌ಗೆ ಪ್ರಮುಖ ಹೊಣೆ!

Share
ಬಿಜೆಪಿ
Share

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ತಮ್ಮ ನೂತನ ಪದಾಧಿಕಾರಿಗಳ ತಂಡವನ್ನು ಪ್ರಕಟಿಸಿದ್ದು, ಪಕ್ಷದಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಿದ್ದಾರೆ. ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಹಿರಿಯ ನಾಯಕ ರಾಮ್ ಮಾಧವ್ ಪ್ರಮುಖ ಜವಾಬ್ದಾರಿಗಳೊಂದಿಗೆ ಪಕ್ಷದ ರಾಷ್ಟ್ರೀಯ ಮಟ್ಟಕ್ಕೆ ಮರಳಿದ್ದಾರೆ.

ಈ ಹೊಸ ಪಟ್ಟಿಯಲ್ಲಿ ರಾಮ್ ಮಾಧವ್ ಮತ್ತು ಉತ್ತರಾಖಂಡದ ಮಾಜಿ ಸಿಎಂ ತೀರಥ್ ಸಿಂಗ್ ರಾವತ್ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ, ಬೈಜಯಂತ್ ಜಯ ಪಂಡಾ, ರೇಖಾ ವರ್ಮಾ ಮತ್ತು ತಾರಿಕ್ ಮನ್ಸೂರ್ ತಮ್ಮ ಉಪಾಧ್ಯಕ್ಷ ಹುದ್ದೆಗಳನ್ನು ಉಳಿಸಿಕೊಂಡಿದ್ದಾರೆ.

National vice presidents

ಮಾಜಿ ಸಚಿವೆ ಸ್ಮೃತಿ ಇರಾನಿ ಮತ್ತು ತ್ರಿಪುರಾದ ಮಾಜಿ ಸಿಎಂ ಬಿಪ್ಲಬ್ ಕುಮಾರ್ ದೇವ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ. ವಿನೋದ್ ತಾವ್ಡೆ ಹಾಗೂ ಸುನಿಲ್ ಬನ್ಸಲ್ ಪ್ರಧಾನ ಕಾರ್ಯದರ್ಶಿಗಳಾಗಿ ಮುಂದುವರಿಯಲಿದ್ದು, ಬಿ.ಎಲ್. ಸಂತೋಷ್ ಅವರು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಪಕ್ಷದ ರಾಷ್ಟ್ರೀಯ ಕೋಶಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಡಿಜಿಟಲ್ ಹಾಗೂ ಸೋಶಿಯಲ್ ಮೀಡಿಯಾ ವಿಭಾಗದಲ್ಲಿದ್ದ ಅಮಿತ್ ಮಾಳವೀಯ ಅವರಿಗೆ ಈ ಬಾರಿ ಸ್ಥಾನ ನೀಡಿಲ್ಲ. ದೀಪಕ್ ಮಸ್ಕೆಗೆ ಸಾಮಾಜಿಕ ಜಾಲತಾಣ ವಿಭಾಗದ ಜವಾಬ್ದಾರಿ ನೀಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ನೂತನ ಪದಾಧಿಕಾರಿಗಳಿಗೆ ಶುಭಾಶಯ ತಿಳಿಸಿದ್ದು, ಈ ಹೊಸ ತಂಡವು ‘ವಿಕಸಿತ ಭಾರತ’ದ ಸಂಕಲ್ಪವನ್ನು ಮುನ್ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *