SUDDIKSHANA KANNADA NEWS/DAVANAGERE/DATE:01_12_2025
ಬೆಂಗಳೂರು: ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
READ ALSO THIS STORY: ದೇಶದಲ್ಲಿ ಭಯಾನಕ ಕೃತ್ಯ ಬಯಲು: ಬಂದೂಕು ತೋರಿಸಿ ಮಹಿಳಾ ಉದ್ಯಮಿ ಬೆತ್ತಲೆಗೊಳಿಸಿ ವಿಡಿಯೋ ಚಿತ್ರೀಕರಣ!
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೀಗಾಗಿ ಇವತ್ತು ಶೇ50 ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿ ಗೆ ಚಪ್ಪಾಳೆ ತಟ್ಟಬಾರದು ಎಂದರು.
ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು.
ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ ಪರಿಚ್ಛೇದ 73, 74 ಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ತಂದರು. ಈ ತಿದ್ದುಪಡಿ ಬರುವವರೆಗೂ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿಯೇ ಇರಲಿಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಬಿಜೆಪಿಯ ರಾಮಾಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ್ದರು. ಆದರೆ, ಸುಪ್ರೀಂಕೋರ್ಟ್ ಮೀಸಲಾತಿ ಪರವಾಗಿ ನಿಂತು ಬಿಜೆಪಿಯ ರಾಮಾ ಜೋಯಿಸ್ ಅರ್ಜಿಯನ್ನು ತಿರಸ್ಕರಿಸಿತು ಎಂದರು.
JJM : 13 ಸಾವಿರ ಕೋಟಿ ಬಾಕಿ
ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಹೆಸರಿಗೆ ಮಾತ್ರ ಪ್ರಧಾನಿ ಅವರ ಹೆಸರಿನಲ್ಲಿದೆ. ಇದರಲ್ಲಿ ರಾಜ್ಯದ ಪಾಲೇ ಹೆಚ್ಚು. ಕೇಂದ್ರದಿಂದ ಇನ್ನೂ 13 ಸಾವಿರ ಕೋಟಿ ಹಣ ರಾಜ್ಯಕ್ಕೆ ವಾಪಾಸ್ ಬರಬೇಕಿದೆ. ಕೇಂದ್ರದ ಮಾಡುವ ಅನ್ಯಾಯವನ್ನು ರೈತರು ಮತ್ತು ರಾಜ್ಯದ ಜನತೆ ವಿರೋಧಿಸಬೇಕು. ಕಬ್ಬಿನ ದರ ನಿಗಧಿಯಲ್ಲೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಂದ ರೈತರಿಗೆ ಅನ್ಯಾಯವಾಯಿತು. ಆದರೂ ರಾಜ್ಯ ಸರ್ಕಾರ ಸರಿದೂಗಿಸಿ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸ್ಪಂದಿಸಿ ಪರಿಹಾರ ನೀಡಿತು ಎಂದರು.
1778 ಕೋಟಿ ರೂ. ಆದಾಯ ಹೆಚ್ಚು
ಇ-ಸ್ವತ್ತು ತಂತ್ರಾಂಶದಿಂದ ಸದ್ಯ 1778 ಕೋಟಿ ತೆರಿಗೆ ಆದಾಯ ಹೆಚ್ಚಾಗುವ ಅಂದಾಜಿದೆ. ತಂತ್ರಾಂಶ ಪರಿಣಾಮಕಾರಿ ಜಾರಿ ಆದರೆ, ಆದಾಯದ ಪ್ರಮಾಣ 2000 ಕೋಟಿಗೂ ಹೆಚ್ಚುವ ನಿರೀಕ್ಷೆ ಇದೆ ಎಂದರು.
- CM Siddaramaiah
- Siddaramaiah
- Siddaramaiah Angry
- Siddaramaiah News
- Siddaramaiah News Updates
- ಕರ್ನಾಟಕ ಸಿಎಂ ಸಿದ್ದರಾಮಯ್ಯ
- ಮುಖ್ಯಮಂತ್ರಿ ಸಿದ್ದರಾಮಯ್ಯ
- ಸಿದ್ದರಾಮಯ್ಯ
- ಸಿದ್ದರಾಮಯ್ಯ ಟೀಕೆ
- ಸಿದ್ದರಾಮಯ್ಯ ತಂತ್ರ
- ಸಿದ್ದರಾಮಯ್ಯ ತಿರುಗೇಟು
- ಸಿದ್ದರಾಮಯ್ಯ ದಾಳ
- ಸಿದ್ದರಾಮಯ್ಯ ನ್ಯೂಸ್
- ಸಿದ್ದರಾಮಯ್ಯ ಭಾಷಣ
- ಸಿದ್ದರಾಮಯ್ಯ ಮಾತು
- ಸಿದ್ದರಾಮಯ್ಯ ಮುಖ್ಯಮಂತ್ರಿ
- ಸಿದ್ದರಾಮಯ್ಯ ವಾಗ್ದಾಳಿ
- ಸಿದ್ದರಾಮಯ್ಯ ಸಿಎಂ





Leave a comment