ದಾವಣಗೆರೆ: ರಾಜ್ಯದ ಕೊತ್ವಾಲ್ ಶಿಷ್ಯಂದಿರಾದ ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಶಾಸಕರ ಮೇಲೆ ಮೊಟ್ಟೆ, ರಾಡ್ ಹಾಗೂ ದೊಣ್ಣೆಗಳಿಂದ ದಾಳಿ ನಡೆಸಿರುವ ಘಟನೆ ತೀವ್ರ ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಹರಿಹರ ಶಾಸಕ ಬಿ. ಪಿ. ಹರೀಶ್ ಮೇಲೆ ಮೊಟ್ಟೆ ಎಸೆದ ಘಟನೆಗೆ ಬಿಜೆಪಿ ನಿಗಿನಿಗಿ ಕೆಂಡವಾಗಿದೆ.
ರಾಹುಲ್ ಗಾಂಧಿಯವರು ದೇಶದ ಯುವಜನತೆಯನ್ನು ದಾರಿ ತಪ್ಪಿಸುತ್ತಿದ್ದಾರೆಂದು ಆಕ್ಷೇಪಿಸಿ ಬಿಜೆಪಿ ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಯತ್ನದಲ್ಲಿ ಸಾಗುತ್ತಿದ್ದ ವೇಳೆ ಕಾಂಗ್ರೆಸ್ ಕಚೇರಿಯಲ್ಲಿ ಮಚ್ಚು, ಲಾಂಗು, ಮೊಟ್ಟೆಗಳನ್ನು ಸಂಗ್ರಹಿಸಿಟ್ಟುಕೊಂಡು ಮಾಜಿ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ್, ಶಾಸಕರಾದ ಸಿ.ಕೆ ರಾಮಮೂರ್ತಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಶಾಸಕರಾದ ಬಿ.ಪಿ ಹರೀಶ್ ಅವರಿಗೆ ಮೊಟ್ಟೆಯಿಂದ ಹೊಡೆದು ಅವಾಚ್ಯ
ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಪಕ್ಷದ ಜಿಲ್ಲಾಧ್ಯಕ್ಷರು, ಪ್ರಮುಖರು ಹಾಗೂ ಕಾರ್ಯಕರ್ತರ ಮೇಲೆಯೂ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಿಜೆಪಿ ನಿಯೋಗವು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದೆ. ಪೊಲೀಸರು ಈ ಕೂಡಲೇ
ಕಾಂಗ್ರೆಸ್ ಗೂಂಡಾಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದೆ.
ಪ್ರತಿಪಕ್ಷದ ಧ್ವನಿಯನ್ನು ಪ್ರಜಾಪ್ರಭುತ್ವದಲ್ಲಿ ಹೋರಾಟದಿಂದ ಎದುರಿಸಬೇಕೇ ಹೊರತು ಹಿಂಸೆಯಿಂದಲ್ಲ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹಿಂಸಾತ್ಮಕ ಸಂಸ್ಕೃತಿ ಬೆಳೆಸುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ನೇರ ದಾಳಿಯಾಗಿದೆ ಎಂದು ಕಿಡಿಕಾರಿದೆ.
ಹಿಂಸೆಗೆ ಪ್ರಚೋದನೆ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕವನ್ನು ಗೂಂಡಾ ರಾಜ್ಯದತ್ತ ತಳ್ಳುವ ಪ್ರಯತ್ನವನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಸದ್ಯದಲ್ಲೇ ಗೂಂಡಾ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ತಕ್ಕಪಾಠ
ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
- Bengaluru police complaint
- BJP protest Bengaluru
- BP Harish egg attack
- CN Ashwathnarayan attack
- Congress vs BJP clash
- DAVANAGERE NEWS
- DK Shivakumar
- Karnataka Politics News
- ಕರ್ನಾಟಕ ರಾಜಕೀಯ
- ಕಾಂಗ್ರೆಸ್ ಘರ್ಷಣೆ
- ಡಾ ಸಿಎನ್ ಅಶ್ವತ್ಥನಾರಾಯಣ್
- ಡಿಕೆ ಶಿವಕುಮಾರ್
- ದಾವಣಗೆರೆ ಸುದ್ದಿ
- ಬಿಜೆಪಿ ಪ್ರತಿಭಟನೆ
- ಬಿಪಿ ಹರೀಶ್
- ಬೆಂಗಳೂರು ಸುದ್ದಿ
- ಸಿ ಕೆ ರಾಮಮೂರ್ತಿ





Leave a comment