Site icon Kannada News-suddikshana

“ಕರುನಾಡ ಜನರ ತೆರಿಗೆ ಹಣ ಲೂಟಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ”: ಬಿಜೆಪಿ ಪ್ರತಿಭಟನೆ

SUDDIKSHANA KANNADA NEWS/ DAVANAGERE/ DATE:12-03-2025

ಬೆಂಗಳೂರು: ತೆರಿಗೆ ಹಣವನ್ನು ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿಧಾನ ಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ಈ ಸಮಿತಿಗೆ ಸಂಬಳ ನೀಡುವ ಮೂಲಕ ರಾಜ್ಯದ ಜನರ ತೆರಿಗೆ ಹಣವನ್ನು ಪೋಲು  ಮಾಡುತ್ತಿರುವುದು ನಾಚಿಗೆಗೇಡಿನ ಸಂಗತಿ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ವಿಧಾನಸಭಾ ಕ್ಷೇತ್ರ, ಜಿಲ್ಲೆ, ರಾಜ್ಯಕ್ಕೆ ಒಬ್ಬರೆಂಬಂತೆ ನೇಮಿಸಿದ್ದು ರಾಜ್ಯ ಅಧ್ಯಕ್ಷರಿಗೆ ಲಕ್ಷಾಂತರ ವೇತನ, ಕ್ಯಾಬಿನೆಟ್ ದರ್ಜೆ ನೀಡಿರುವುದು ಅತ್ಯಂತ ಖಂಡನೀಯ. ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರ ಗೌರವಧನ ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ, ಬಿಸಿಯೂಟ ಅಡುಗೆ ಮಾಡುವವರು, ದಾದಿಯರು, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡದ ಈ ಸರ್ಕಾರದ ಜನವಿರೋಧಿ ನಿಲುವುಗಳನ್ನು ಖಂಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವ. ವಿಜಯೇಂದ್ರ. ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ವಿಧಾನ ಪರಿಷತ್‌ನ ನಾಯಕ ಭೋಜೆಗೌಡ, ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

Exit mobile version